ಹಾಸನ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ 14 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡು, ನಾಲ್ವರು ಸ್ಥಿತಿ ಗಂಭೀರವಾಗಿರುವ ಘಟನೆ ಸಕಲೇಶಪುರ ತಾಲೂಕಿನ ನಿಡನೂರು ಕೂಡಿಗೆ ಬಳಿ ನಡೆದಿದೆ.
ತಮಿಳುನಾಡಿನ ಸೇಲಂನಿಂದ ಮಡಿಕೇರಿಯ ಶನಿವಾರಸಂತೆ ಬಳಿ ಇರುವ ಕಾಫಿ ತೋಟಕ್ಕೆ ಕಾರ್ಮಿಕರನ್ನು ಟಾಟಾ ವಿಂಗರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ.
ವಾಹನದಲ್ಲಿ ಸಿಲುಕಿದ್ದ ಕೂಲಿ ಕಾರ್ಮಿಕರನ್ನು ಸ್ಥಳೀಯರು ಹಾಗೂ ಪೊಲೀಸರು ಸೇರಿ ಹೊರ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.