ರಾಯಚೂರು: ಜಿಲ್ಲೆಯ ಸಿರವಾರದಲ್ಲಿ ಚಿಕ್ಕಮಕ್ಕಳು ಸೇರಿದಂತೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ಹಾಗೂ ಟಂಟಂ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಸಿರವಾರ ಪಟ್ಟಣದ ಹೆಚ್.ಪಿ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ 4 ಜನ ಮಕ್ಕಳು ಸೇರಿ 11 ಜನರ ಪರಿಸ್ಥಿತಿ ಗಂಭೀರವಾಗಿದೆ. ಶಾಲೆಗಳು ಆರಂಭವಾದರೂ ಗ್ರಾಮೀಣ ಭಾಗದಲ್ಲಿ ಮಕ್ಕಳನ್ನ ಕೂಲಿಗೆ ಕಳುಹಿಸಲಾಗುತ್ತಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಮಕ್ಕಳು ಈಗ ಆಸ್ಪತ್ರೆ ಸೇರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ಹಲವರು ಸರತಿಯಲ್ಲಿ ನಿಂತಿದ್ದಾರೆ: ರೇಣುಕಾಚಾರ್ಯ
Advertisement
ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಸಿರವಾರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ವಾಹನಗಳ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇದನ್ನೂ ಓದಿ: ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್
Advertisement
ಕೂಲಿ ಕೆಲಸಕ್ಕೆ ಮಕ್ಕಳನ್ನ ಕರೆದೊಯ್ಯುವುದಲ್ಲದೇ ಅಧಿಕ ಸಂಖ್ಯೆಯಲ್ಲಿ ಜನರನ್ನ ತುಂಬಿಕೊಂಡು ಹೋಗುವುದು, ಬೇಜವಾಬ್ದಾರಿಯಾಗಿ ವಾಹನ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಅಂತ ಗಾಯಾಳುಗಳ ಸಂಬಂಧಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.