ನವದೆಹಲಿ: ಭಾರತ (India) ಉತ್ತಮ ಜಾಗವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ಇದರಿಂದಾಗಿ ನಾವು ಭಾರತಕ್ಕೆ ಆದ್ಯತೆಯನ್ನು ನೀಡುತ್ತೇವೆ ಎಂದು ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈಲಾಮಾ (Dalai Lama) ಹೇಳಿದರು.
ಹಿಮಾಚಲ ಪ್ರದೇಶದ ಕಾಂಗ್ರಾ ವಿಮಾನ ನಿಲ್ದಾಣದಲ್ಲಿ ಚೀನಾ (China) ಘರ್ಷಣೆಯ ಕುರಿತು ಪ್ರತಿಕ್ರಿಯಿಸಿದ ಅವರು, ಯುರೋಪ್, ಆಫ್ರಿಕಾ ಮತ್ತು ಏಷ್ಯಾ ರಾಷ್ಟ್ರಗಳು ಸುಧಾರಣೆಗೊಳ್ಳುತ್ತಿವೆ. ಅದೇ ರೀತಿ ಚೀನಾವೂ ಹೊಂದಿಕೊಳ್ಳುತ್ತಿದೆ. ಆದರೆ ಚೀನಾಕ್ಕೆ ಹಿಂತಿರುಗಲು ಯಾವುದೇ ಅರ್ಥವಿಲ್ಲ. ನನಗೆ ಭಾರತವು ಉತ್ತಮ ಸ್ಥಳವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ಇದಕ್ಕೆ ನಾನು ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು.
Advertisement
Advertisement
ಡಿ. 9ರಂದು ಭಾರತ- ಚೀನಾ ಘರ್ಷಣೆ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದಲ್ಲಿ ತವಾಂಗ್‍ನ ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಚೀನಿಯರು ಭೂಸ್ವಾಧೀನಕ್ಕೆ ಯತ್ನಿಸಿದ್ದು, ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದರು. ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ ಚೀನಾ ಸೈನಿಕರು ತಮ್ಮ ಸ್ಥಾನಕ್ಕೆ ಮರಳಿದರು. ಅಲ್ಲದೇ ಸೇನಾ ಕಮಾಂಡರ್‌ಗಳ ಸಭೆಯಲ್ಲಿ ಗಡಿಯಲ್ಲಿ ಶಾಂತಿ ಕಾಪಾಡುವಂತೆ ಕೇಳಿಕೊಂಡರು.
Advertisement
ಈ ಬಗ್ಗೆ ರಾಜ್ಯ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ ನೀಡಿದ್ದು, ಘಟನೆ ಸಂದರ್ಭದಲ್ಲಿ ಯಾವುದೇ ಸಾವು-ನೋವುಗಳಾಗಿಲ್ಲ. ಬದಲಿಗೆ ಕೆಲವು ಸೈನಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರಿಂದ ನಾಡದ್ರೋಹಿ ಘೋಷಣೆ – 20ಕ್ಕೂ ಹೆಚ್ಚು ಮಂದಿ ವಶ
Advertisement
ದಲೈಲಾಮಾ ದೆಹಲಿಯಲ್ಲಿ 2-3 ದಿನಗಳ ಕಾಲ ಇರಲಿದ್ದು, ನಂತರ ಅವರು ಆಧ್ಯಾತ್ಮಿಕ ಬೋಧನೆಗಳು ಮತ್ತು ಇತರ ಕಾರ್ಯಕ್ರಮಗಳಿಗಾಗಿ ಬಿಹಾರದ ಬೋಧಗ್ಯಾಕ್ಕೆ ಹೋಗುತ್ತಾರೆ. ದೆಹಲಿಯಲ್ಲಿ ಕೆಲವು ಸಭೆಗಳು ಮತ್ತು ಕಾರ್ಯಕ್ರಮಗಳನ್ನು ಹೊರತುಪಡಿಸಿ, ದೆಹಲಿಯಲ್ಲಿ ಆರೋಗ್ಯ ತಪಾಸಣೆ ನಡೆಯಲಿದೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ