ಸಿನಿಮಾ ಯೋಜನೆಗಳ ಹೆಸರಿನಲ್ಲಿ ವಿದೇಶಕ್ಕೆ ಅಕ್ರಮವಾಗಿ ಹಣ ರವಾನಿಸಲಾಗಿದೆ ಎಂಬ ಆರೋಪದ ಮೇಲೆ ನಟಿ ರಕುಲ್ ಪ್ರೀತ್ ಸಿಂಗ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (Income Tax Department) ದಾಳಿ ನಡೆಸಿದೆ.
ಚಲನಚಿತ್ರ ಯೋಜನೆಗಳ ಹೆಸರಿನಲ್ಲಿ ವಿದೇಶಕ್ಕೆ ಹಣವನ್ನು ರವಾನಿಸಲಾಗಿದೆ ಎಂಬ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆಯು ಚಲನಚಿತ್ರೋದ್ಯಮದ ಹಲವು ಗಣ್ಯರು ಮತ್ತು ಅವರ ಕಂಪನಿಗಳಿಗೆ ಸಂಬಂಧಿಸಿದ ಸುಮಾರು 12 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.
ನಟಿ ರಕುಲ್ ಪ್ರೀತ್ ಸಿಂಗ್, ನಿರ್ಮಾಪಕ ವಾಶು ಭಗ್ನಾನಿ ಮತ್ತು ಪನೋರಮಾ ಸ್ಟುಡಿಯೋಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ತಲಾಶ್ ನಡೆಸಲಾಗುತ್ತಿದೆ.
ರಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ಮೇ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ಪತಿ ಪಟ್ನಿ ಔರ್ ವೋ ದೋ’ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ, ಸಾರಾ ಅಲಿ ಖಾನ್ ಮತ್ತು ವಾಮಿಕಾ ಗಬ್ಬಿ ಅವರೊಂದಿಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ಗೆ ಶಾಕ್ ಮೇಲೆ ಶಾಕ್ – ಪ್ರದೋಷ್ ಮಾಫಿ ಸಾಕ್ಷಿ ದಾಖಲು ಮುಂದೂಡಲು ಸಲ್ಲಿಸಿದ್ದ ಅರ್ಜಿ ವಜಾ
ಇನ್ನು ವಶು ಭಗ್ನಾನಿ ಅವರ ಪೂಜಾ ಎಂಟರ್ಟೈನ್ಮೆಂಟ್ ಸಂಸ್ಥೆಯು ಕೊನೆಯದಾಗಿ ‘ಮೇರೆ ಹಸ್ಬೆಂಡ್ ಕಿ ಬಿವಿ’ ಚಿತ್ರವನ್ನು ನಿರ್ಮಿಸಿತ್ತು. ಅರ್ಜುನ್ ಕಪೂರ್, ಭೂಮಿ ಪೆಡ್ನೇಕರ್ ಮತ್ತು ರಕುಲ್ ಪ್ರೀತ್ ಸಿಂಗ್ ನಟಿಸಿದ್ದ ಈ ಸಿನಿಮಾ ಫೆಬ್ರವರಿ 21, 2025 ರಂದು ತೆರೆಕಂಡಿತ್ತು. ಮತ್ತೊಂದೆಡೆ, ಪನೋರಮಾ ಸ್ಟುಡಿಯೋಸ್ ಸಂಸ್ಥೆಯ ಇತ್ತೀಚಿನ ಚಿತ್ರ ‘ಧಮಾಲ್ 4’ ಆಗಿದ್ದು, ಇದು ಜುಲೈ 10ರಂದು ಬಿಡುಗಡೆಯಾಗಿದೆ. ಇದೇ ನಿರ್ಮಾಣ ಸಂಸ್ಥೆಯಿಂದ ಬಿಡುಗಡೆಯಾಗಲಿರುವ ಮುಂದಿನ ಬಹುನಿರೀಕ್ಷಿತ ಚಿತ್ರ ‘ದೃಶ್ಯಂ: ದಿ ಕನ್ಕ್ಲೂಷನ್’ ಆಗಿದ್ದು, ಇದು ಅಕ್ಟೋಬರ್ 2ರಂದು ಚಿತ್ರಮಂದಿರಗಳಿಗೆ ಬರಲು ಸಜ್ಜಾಗಿದೆ.ಇದನ್ನೂ ಓದಿ: ಬೇಲೂರು | ಆಸ್ತಿಗಾಗಿ ತಮ್ಮನನ್ನೇ ಚಾಕು ಇರಿದು ಹತ್ಯೆಗೈದ ಅಣ್ಣ

