ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಸಂಕಷ್ಟ – ಐಟಿ ಇಲಾಖೆಯಿಂದ 1,700 ಕೋಟಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌

Public TV
1 Min Read
telangana congress guarantee

ನವದೆಹಲಿ: ಆದಾಯ ತೆರಿಗೆ ಇಲಾಖೆಯಿಂದ (Income Tax Department) ಕಾಂಗ್ರೆಸ್‌ಗೆ (Congress) ಡಿಮ್ಯಾಂಡ್‌ ನೋಟಿಸ್‌ ಬಂದಿದೆ. ಚುನಾವಣೆ ಹೊತ್ತಲ್ಲಿ ದಂಡ, ಬಡ್ಡಿ ಸೇರಿದಂತೆ 1,700 ಕೋಟಿ ರೂಪಾಯಿ ಕಟ್ಟುವ ಅನಿವಾರ್ಯತೆ ಕಾಂಗ್ರೆಸ್‌ ಮುಂದಿದೆ.

ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಅದಾದ ಒಂದು ದಿನದ ನಂತರ ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ಡಿಮ್ಯಾಂಡ್‌ ನೋಟಿಸ್‌ನ್ನು ಕಾಂಗ್ರೆಸ್ ಸ್ವೀಕರಿಸಿದೆ. ಇದನ್ನೂ ಓದಿ: ಒಂದೇ ಕ್ಷೇತ್ರದಲ್ಲಿ ‘ಪನ್ನೀರಸೆಲ್ವಂ’ ಹೆಸರಿನ ಐವರು ಕಣಕ್ಕೆ – ಮಾಜಿ ಸಿಎಂ ಪನ್ನೀರಸೆಲ್ವಂಗೆ ಪೀಕಲಾಟ!

income

ಹೊಸ ಸೂಚನೆಯು 2017-18 ರಿಂದ 2020-21 ರವರೆಗಿನ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. ಆದಾಯ ತೆರಿಗೆ ಅಧಿಕಾರಿಗಳು 200 ಕೋಟಿ ರೂ. ದಂಡವನ್ನು ವಿಧಿಸಿ ಮತ್ತು ಅದರ ಹಣವನ್ನು ಸ್ಥಗಿತಗೊಳಿಸಿದ ನಂತರ ಕಾಂಗ್ರೆಸ್ ಈಗಾಗಲೇ ಹಣದ ಕೊರತೆಯನ್ನು ಎದುರಿಸುತ್ತಿದೆ. ಪ್ರಕರಣದಲ್ಲಿ ಪಕ್ಷವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆ ಇದೆ.

ಏಪ್ರಿಲ್ 19 ರಿಂದ ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯು ತೆರಿಗೆ ಅಧಿಕಾರಿಗಳನ್ನು ವಿಪಕ್ಷಗಳ ವಿರುದ್ಧ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ಪರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬ್ಯಾಟಿಂಗ್‌

ನಮ್ಮನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ನೋಟಿಸ್‌ಗಳನ್ನು ಕಳುಹಿಸಲಾಗುತ್ತಿದೆ. ಇದು ತೆರಿಗೆ ಭಯೋತ್ಪಾದನೆ. ಇದನ್ನು ಕಾಂಗ್ರೆಸ್ ಮೇಲೆ ದಾಳಿ ಮಾಡಲು ಬಳಸಲಾಗುತ್ತಿದೆ. ಇದು ನಿಲ್ಲಬೇಕು ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ಮಾತನಾಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಪ್ರಚಾರ ಮುಂದುವರಿಯಲಿದ್ದು, ಪಕ್ಷದ ಭರವಸೆಗಳನ್ನು ದೇಶದ ಜನತೆಗೆ ಕೊಂಡೊಯ್ಯಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಾವು ಈ ಸೂಚನೆಗಳಿಗೆ ಹೆದರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌, ಯುಪಿ ರಾಜಕಾರಣಿ ಮುಖ್ತಾರ್‌ ಅನ್ಸಾರಿ ಹೃದಯಾಘಾತದಿಂದ ಸಾವು

Share This Article