ನವದೆಹಲಿ: ಕಾಡುಗೊಲ್ಲ ಸಮುದಾಯವನ್ನು (Kadugolla Community) ಪರಿಶಿಷ್ಟ ಪಂಗಡಕ್ಕೆ (ST) ಸೇರ್ಪಡೆ ಮಾಡುವ ಕುರಿತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ಅವರು ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರನ್ನು ದೆಹಲಿಯಲ್ಲಿ (New Delhi) ಭೇಟಿ ಮಾಡಿ ಚರ್ಚೆ ಮಾಡಿದರು.
ಕರ್ನಾಟಕ ಭವನದಲ್ಲಿ ಭೇಟಿ ಮಾಡಿದ ಅವರು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ತ್ವರಿತವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಸಹಾಯ ಮಾಡುವಂತೆ ಟಿ.ಬಿ ಜಯಚಂದ್ರ ಅವರು ಕೇಂದ್ರ ಸಚಿವ ವಿ ಸೋಮಣ್ಣ ಅವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ
ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದರಿಂದ ಆ ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಸವಲತ್ತುಗಳು ದೊರೆಯಲಿವೆ ಎಂದು ಜಯಚಂದ್ರ ಅವರು ಇದೇ ವೇಳೆ ಕೇಂದ್ರ ಸಚಿವರ ಗಮನಕ್ಕೆ ತಂದರು. ಇದನ್ನೂ ಓದಿ: ದರ್ಶನ್ ಇಂದೇ ಹೈಕೋರ್ಟ್ ಮೊರೆ ಹೋಗ್ತಾರಾ? – ಅರ್ಜಿ ಸಲ್ಲಿಸಿದ್ರೆ ಮುಂದೇನು?