ಬೆಂಗಳೂರು: ಉಪ ಮುಖ್ಯಮಂತ್ರಿ (DCM) ಹುದ್ದೆಯು ಸಾಂವಿಧಾನಿಕ ಹುದ್ದೆ ಅಲ್ಲ. ಅದಕ್ಕೆ ಹೆಚ್ಚು ಮಹತ್ವ ಕೊಡಬಾರದು ಎಂದು ಮಾಜಿ ಸಚಿವರೂ ಆಗಿರುವ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ತಿಳಿಸಿದ್ದಾರೆ.
3 ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ (Rajanna) ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪತ್ರ ಬರೆಯುತ್ತೇನೆ ಅಂತ ಹೇಳಿದ್ದಾರೆ. ಅದು ಸಲಹೆ ರೂಪದಲ್ಲಿ ಕೊಟ್ಟಿರಬಹುದು ಎಂದಿದ್ದಾರೆ. ಇದನ್ನೂ ಓದಿ: ಜನ್ಮದಿನದಂದು ದೆಹಲಿಯಲ್ಲಿ ಮೋದಿ ಮೆಟ್ರೋ ರೈಡ್ – ಪ್ರಯಾಣಿಕರೊಂದಿಗೆ ಸೆಲ್ಫಿ
Advertisement
Advertisement
ಡಿಸಿಎಂ ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು. ಏಕೆಂದರೆ ಅದು ಸಾಂವಿಧಾನಿಕ ಹುದ್ದೆ ಅಲ್ಲ. ಸರ್ಕಾರ ಆಗಿ ನಾವು ನೋಡಬೇಕಾದ ಕೆಲಸ ತುಂಬಾ ಇದೆ. ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಬೇಕು. ಹೀಗಾಗಿ ಅದಕ್ಕೆ ಹೇಗೆ ಹಣ ಸಂಗ್ರಹ ಮಾಡಬೇಕು ಅನ್ನೋದರ ಬಗ್ಗೆ ಗಮನಹರಿಸಬೇಕು. ಗ್ಯಾರಂಟಿ ಯೋಜನೆ ಜೊತೆಗೆ ಬೇರೆ ಬೇರೆ ಅಭಿವೃದ್ಧಿ ಕೆಲಸ ಮಾಡುವ ಬಗ್ಗೆಯೂ ಗಮನ ಕೊಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಂಗೀತಾ ಬಿಜಲಾನಿ ಜೊತೆ ಸಲ್ಮಾನ್ ಮದುವೆ ಕ್ಯಾನ್ಸಲ್ ಆಗಿದ್ಯಾಕೆ- ಅಷ್ಟಕ್ಕೂ ಆಗಿದ್ದೇನು?
Advertisement
Advertisement
ಲೋಕಸಭೆ ಚುನಾವಣೆ ಸಮಯದಲ್ಲಿ ಇದಕ್ಕೆ ಪ್ರಾಮುಖ್ಯತೆ ಕೊಡಬಾರದು. ಅವರ ಹೇಳಿಕೆ ರಾಜಕೀಯವಾಗಿ ಪ್ರಸ್ತುತ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತದೆ. ರಾಜಣ್ಣ ಹೇಳಿಕೆಗೆ ಸಹಮತ ಅಂತ ಹೇಳುವುದಿಲ್ಲ. ಡಿಸಿಎಂ ಹುದ್ದೆಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ರಾಜಕೀಯವಾಗಿ ಡಿಸಿಎಂ ಹುದ್ದೆ ಸ್ಕೋಪ್ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ಎಲ್ಲವನ್ನ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
Web Stories