ಬೆಂಗಳೂರು: ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. 20 ಮಂದಿ ಶಾಸಕರಿಗೆ ಈ ಬಾರಿ ಮಂತ್ರಿ ಪಟ್ಟ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ, ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಅಂತಿಮ ಸಭೆ ನಡೆಸಿ ಪಟ್ಟಿಗೆ ಒಪ್ಪಿಗೆ ನೀಡಿದ್ದಾರೆ.
ಸಂಜೆ 4 ಗಂಟೆಗೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಆಗಿ ಜಿಎಸ್ ಪಾಟೀಲ್, ಉಪ ಸ್ಪೀಕರ್ ಆಗಿ ಎಸ್ ಪೊನ್ನಣ್ಣ ಆಯ್ಕೆಯಾಗಿದ್ದಾರೆ. ಪರಿಷತ್ ಸ್ಪೀಕರ್ ಅಗಿ ಸಲೀಂ ಅಹ್ಮದ್, ಉಪ ಸ್ಪೀಕರ್ ಆಗಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ವಿಧಾನಸಭೆಯ ಸ್ಪೀಕರ್ ರೇಸ್‌ನಲ್ಲಿ ದಿನೇಶ್ ಗುಂಡೂರಾವ್, ಟಿಬಿ ಜಯಚಂದ್ರ, ಆರ್‌ವಿ ದೇಶಪಾಂಡೆ ಹೆಸರು ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಹೈಕಮಾಂಡ್ ಜಿಎಸ್ ಪಾಟೀಲ್ ಅವರಿಗೆ ಮಣೆ ಹಾಕಿದೆ.
ಪಟ್ಟಿಯಲ್ಲಿ ಯಾರಿದ್ದಾರೆ?
ಪಿಎಂ ನರೇಂದ್ರಸ್ವಾಮಿ, ಶಿವರಾಜ ತಂಗಡಗಿ, ರುದ್ರಪ್ಪ ಲಮಾಣಿ, ಕೆಎಸ್ ಬಸವಂತಪ್ಪ, ಬಿ ನಾಗೇಂದ್ರ, ಟಿ ರಘುಮೂರ್ತಿ, ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಮಂಕಾಳ ವೈದ್ಯ , ಅಜಯ್ ಸಿಂಗ್, ಚಲುವರಾಯಸ್ವಾಮಿ, ಶಿವಲಿಂಗೇಗೌಡ, ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್, ಲಕ್ಷ್ಮಣ ಸವದಿ.
