ಮುಂಬೈ: 12 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ (Student) ಮೇಲೆ ಪದೇ ಪದೇ ಅತ್ಯಾಚಾರ (Rape) ಎಸಗಿದ ಆರೋಪದಡಿ ಶಾಲೆಯ ಗಣಿತ ಶಿಕ್ಷಕನನ್ನು (Teacher) ಪೊಲೀಸರು ಬಂಧಿಸಿರುವ (Arrest) ಘಟನೆ ಮಹಾರಾಷ್ಟ್ರದ (Maharashtra) ನಾಗಪುರದಲ್ಲಿ ನಡೆದಿದೆ.
57 ವರ್ಷದ ಆರೋಪಿ ಶಿಕ್ಷಕ ಕಳೆದ ಮೂರು ತಿಂಗಳಿನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ ಆರನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಕೆಲವು ದಿನಗಳಿಂದ ಆಕೆಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆಕೆಯ ತಾಯಿ ಏನಾಯಿತು ಎಂದು ವಿಚಾರಿಸಿದಾಗ ಸಂತ್ರಸ್ತೆ ತನಗಾದ ಅನ್ಯಾಯವನ್ನು ವಿವರಿಸಿದ್ದಾಳೆ ಎಂದು ಸಕ್ಕರೆದಾರ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: 4 ವರ್ಷದ ಪ್ರೀತಿಗೆ ಎಳ್ಳುನೀರು- ರೊಚ್ಚಿಗೆದ್ದು ಅಪ್ರಾಪ್ತ ಪ್ರಿಯತಮೆಗೆ ಚಾಕು ಇರಿದ!
ಏಪ್ರಿಲ್ 5ರಂದು ಆರೋಪಿಯು ಪರೀಕ್ಷೆಯ ನಂತರ ತನ್ನನ್ನು ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ವರ್ಷ ಡಿಸೆಂಬರ್ 10ರಿಂದ ತನ್ನನ್ನು ಮದುವೆಯಾಗುವುದಾಗಿ ಹೇಳಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ನಮ್ಮ ನಡುವಿನ ಸಂಬಂಧವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ (Threat) ಹಾಕಿದ್ದಾನೆ ಎಂದು ಸಂತ್ರಸ್ತೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಬೀದಿ ನಾಯಿಗಳ ದಾಳಿ – ಅಪ್ರಾಪ್ತ ಬಾಲಕ ಮೃತ್ಯು
ಈ ಕುರಿತು ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಐಪಿಸಿ (IPC) ಸೆಕ್ಷನ್ 376 (2) (f) (ಹನ್ನೆರಡು ವರ್ಷದೊಳಗಿನ ಬಾಲಕಿ ಮೇಲೆ ಅತ್ಯಾಚಾರ), 376 (2) (n) (ಪುನರಾವರ್ತಿತ ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ) ಮತ್ತು ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಾರ್‌ನಲ್ಲಿ ರಾಮಾಯಣ ವೀಡಿಯೋ – ಓರ್ವ ಅರೆಸ್ಟ್