ಬೆಂಗಳೂರು: ಪಶು ಸಂಗೋಪನೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ ಶಿಕ್ಷಕನನ್ನು ಪೊಲಿಸರು ಬಂಧಿಸಿದ್ದಾರೆ.
ಬಂಧತನನ್ನು ಜ್ಞಾನದೇವ್ ಜಾಧವ್ ಎಂದು ಗುರುತಿಸಲಾಗಿದ್ದು, ಈತನನ್ನು ಸಂಜಯ್ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಶು ಸಂಗೋಪನೆ ಸಚಿವರು ನನಗೆ ಆಪ್ತರು ಅಂತಾ ಹೇಳಿ ಅಭ್ಯರ್ಥಿಗಳಿಗೆ ವಂಚಿಸಿದ್ದಾನೆ.
Advertisement
Advertisement
ಜ್ಞಾನದೇವ್ ಜಾಧವ್ ಇಲಾಖೆಯ ಎಫ್‍ಡಿಎ, ಎಸ್‍ಡಿಎ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಿದ್ದ. ಅಲ್ಲದೆ ಪಶುಸಂಗೋಪನೆ ಇಲಾಖೆಯ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಆದೇಶ ಮತ್ತು ಹೆಸರನ್ನ ನಕಲಿ ಮಾಡಿ ದಾಖಲೆ ಸೃಷ್ಟಿಸಿದ್ದ. ನೇಮಕಾತಿ ಪ್ರಕ್ರಿಯೆ ಯನ್ನ ಥೇಟ್ ಸರ್ಕಾರಿ ನೇಮಕಾತಿ ಯಂತೆ ನಡೆಸಿದ್ದ.
Advertisement
ಜುಲೈ 30ರ ಒಳಗೆ ಅಕ್ಷೇಪಗಳಿದ್ದರೆ ಅರ್ಜಿ ಸಲ್ಲಿಸುವಂತೆ ಇಲಾಖೆ ಹೆಸರಿನಲ್ಲಿ ಆದೇಶ ಹೊರಡಿಸಿದ್ದ. ಹೀಗೆ ಹುದ್ದೆಗೆ ಅರ್ಜಿ ಸಲ್ಲಿಸಿದ 63 ಅಭ್ಯರ್ಥಿಗಳಿಂದ ತಲಾ 2 ಲಕ್ಷ ಹಣ ಪಡೆದಿದ್ದ. ಕೆಲ ಅಭ್ಯರ್ಥಿಗಳು ಇಲಾಖೆಯನ್ನ ಸಂಪರ್ಕಿಸಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
Advertisement
ಈ ಸಂಬಂಧ ಜಾಧವ್ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.