ಹಾಸನ: ನಗರದ (Hassan) ಲಾಡ್ಜ್ ಒಂದರಲ್ಲಿ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು (Teacher) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಶನಿವಾರ ಅವರು ಲಾಡ್ಜ್‌ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು. ಇದನ್ನೂ ಓದಿ: HSR ಲೇಔಟ್ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಕೇಸ್ – 555 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ಬೇಲೂರು (Beluru ) ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅವರು ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿವೃತ್ತಿಯಾಗಲು ಕೇವಲ ಮೂರು ವರ್ಷಗಳು ಮಾತ್ರ ಬಾಕಿ ಇತ್ತು. ರಂಗಸ್ವಾಮಿಯವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಸೀಜ್