ಚಿಕ್ಕಮಗಳೂರು: ಗಂಟಲಿನಲ್ಲಿ ಕೊಬ್ಬರಿ ಚೂರು ಸಿಲುಕಿ ಶಿಕ್ಷಕಿಯೊಬ್ಬರು ಸಾವನ್ನಪ್ಪಿದ್ದ ಆಘಾತಕಾರಿ ಘಟನೆ ಚಿಕ್ಕಮಗಳೂರಿನ ಸಂಜೀವಿನಿ ಶಾಲೆಯಲ್ಲಿ ನಡೆದಿದೆ.
ನವ್ಯಶ್ರೀ (28) ಸಾವನ್ನಪ್ಪಿದ್ದ ಶಿಕ್ಷಕಿ. ಮೂಲತಃ ಚಿಕ್ಕಮಗಳೂರಿನ ಹಿರೇಮಗಳೂರು ನಿವಾಸಿಯಾಗಿದ್ದಾರೆ. ಮದುವೆಯಾಗಿ 5 ವರ್ಷವಾಗಿರೋ ನವ್ಯಶ್ರೀಗೆ 10 ತಿಂಗಳ ಮಗು ಕೂಡ ಇದೆ. ಎಂದಿನಂತೆ ನವ್ಯ ಚಿಕ್ಕಮಗಳೂರು ನಗರದಲ್ಲಿರುವ ಸಾಲುಮರದಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ವಾಪಸ್ ಬಂದಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ್ದ ತೆಂಗಿನ ಕಾಯಿಯ ಚೂರನ್ನು ತಿಂದಿದ್ದಾರೆ. ನಂತರ ಅದೇನಾಯ್ತೋ ಏನೋ ಗೊತ್ತಿಲ್ಲ. ಅವರ ಅನ್ನನಾಳಕ್ಕೆ ಕಾಯಿಯ ಚೂರು ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
Advertisement
Advertisement
ನಗರದಲ್ಲಿರೋ ಸಂಜೀವಿನಿ ಸ್ಕೂಲ್‍ನಲ್ಲಿ ಶಿಕ್ಷಕಿಯಾಗಿರೋ ನವ್ಯಶ್ರೀಗೆ ದೇವರು ಎಂದರೆ ಅಪಾರ ಪ್ರೀತಿ-ಗೌರವ. ಶನಿವಾರ ಬೆಳಗ್ಗೆ ಶನಿ ದೇವರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಶಾಲೆಗೆ ಬಂದಿದ್ದರು. ಒಂದು ಪಿರಿಯಡ್ ಫ್ರೀ ಇದ್ದ ಕಾರಣ ಶಾಲೆಯ ಪಕ್ಕದಲ್ಲಿರೋ ಸಾಲುಮರದಮ್ಮ ದೇವಸ್ಥಾನಕ್ಕೆ ಸಹಶಿಕ್ಷಕಿಯರ ಜೊತೆ ಹೋಗಿ ಬಂದಿದ್ದಾರೆ. ದೇವಸ್ಥಾನದಿಂದ ಬಂದು ಪೂಜೆ ಮಾಡಿಸಿದ್ದ ತೆಂಗಿನಕಾಯಿ ಚೂರನ್ನ ಎಲ್ಲರಿಗೂ ಹಂಚಿ ತಾನು ಸೇವಿಸಿದ್ದಾರೆ. ಇದನ್ನೂ ಓದಿ: ಇದು ನಿಜಕ್ಕೂ ಆತಂಕ..ಅಚ್ಚರಿ ನ್ಯೂಸ್- ಸೇಬು ತಿಂದ 11 ವರ್ಷದ ಬಾಲಕ ಸಾವು
Advertisement
Advertisement
ತೆಂಗಿನಕಾಯಿಯ ಚೂರು ತಿನ್ನುತ್ತಿದ್ದಂತೆ ಅದೇನಾಯ್ತೋ ಗೊತ್ತಿಲ್ಲ, ಇದ್ದಕ್ಕಿದ್ದಂತೆ ಎದೆನೋವೆಂದು ಕುಸಿದು ಬಿದ್ದಿದ್ದಾರೆ. ತಕ್ಷಣ ಅಲ್ಲೇ ಇದ್ದ ಶಿಕ್ಷಕರು ಅವರಿಗೆ ನೀರು ಕುಡಿಸಿ, ಎದೆ ಹೊತ್ತುತ್ತಿದಂತೆ ನವ್ಯಶ್ರೀಗೆ ಅನ್ನನಾಳದಲ್ಲಿ ಸಿಲುಕಿದ್ದ ತೆಂಗಿನಕಾಯಿ ಚೂರು ಬಾಯಿಂದ ಹೊರಬಂದಿದೆ. ಆದರೆ ಉಸಿರಿನ ತೊಂದರೆಯಿಂದ ತೀವ್ರವಾಗಿ ಬಳಲುತ್ತಿದ್ದ ನವ್ಯಶ್ರೀಯನ್ನ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನವ್ಯಶ್ರೀ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಗಂಟಲಲ್ಲಿ ಸೆರಲ್ಯಾಕ್ ಸಿಲುಕಿ 3 ತಿಂಗಳ ಮಗು ಸಾವು
ಒಟ್ಟಿನಲ್ಲಿ ತೆಂಗಿನಕಾಯಿ ಚೂರಿನಿಂದ ನವ್ಯಶ್ರೀ ಪ್ರಾಣ ಕಳೆದುಕೊಂಡಿರುವುದು ಮಾತ್ರ ದುರಂತ. ಇದೀಗ ಇಡೀ ಕುಟುಂಬವೇ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ಪುಟ್ಟ ಮಗುವನ್ನ ಬಿಟ್ಟು ಅಗಲಿದ ತಾಯಿಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.