ಚಿಕ್ಕಮಗಳೂರು: ಪತ್ನಿ ಜೊತೆ ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ (Selfie) ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಕೆಮ್ಮಣ್ಣುಗುಂಡಿಯ (Kemmanugundi) ಬಳಿ ನಡೆದಿದೆ.
ಮೃತ ಶಿಕ್ಷಕನನ್ನು (Teacher) ಸಂತೋಷ್ (40) ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಪತ್ನಿ ಜೊತೆ ಸಂತೋಷ್ ಬಂದಿದ್ದರು. ಈ ವೇಳೆ ರಸ್ತೆ ಬದಿ ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ ಆಗಿದ್ದ ವ್ಯಕ್ತಿಗೆ 25 ಸಾವಿರ ದಂಡ!
ಸಂತೋಷ್ ಅವರು ತರೀಕೆರೆ ತಾಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ಅಗ್ನಿಶಾಮಕದಳದ ಸಿಬ್ಬಂದಿ ಪ್ರಪಾತದಿಂದ ಮೃತದೇಹವನ್ನು ತೆಗೆದಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

