ನೀರು ತರಲು ಹೋದ ಶಿಕ್ಷಕ ಬಾವಿಗೆ ಬಿದ್ದು ಸಾವು

Public TV
1 Min Read
vlcsnap 2022 01 29 22h02m36s139

ಕಲಬುರಗಿ: ನೀರು ತರಲು ಹೋಗಿ ಆಯತಪ್ಪಿ ಬಾವಿಗೆ ಬಿದ್ದು ಶಿಕ್ಷಕ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ತೆಲ್ಲೂರ್ ಗ್ರಾಮದಲ್ಲಿ ನಡೆದಿದೆ.

ಮಲ್ಲಣ್ಣ ಮಡಿವಾಳ (30) ಬಾವಿಗೆ ಬಿದ್ದು ಸಾವನ್ನಪ್ಪಿದ ದುರ್ದೈವಿ. ಮಲ್ಲಣ್ಣ ತನ್ನ ಹೊಲದಲ್ಲಿರುವ ಬಾವಿಗೆ ನೀರು ತರಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಈಜು ಬಾರದ ಕಾರಣ ಮಲ್ಲಣ್ಣ ಬಾವಿಯಲ್ಲಿಯೇ ಮುಳುಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸಾಲ ಬಾಧೆ -ಹೆಂಡತಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡ

Police Jeep 1 1

ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಮಲ್ಲಣ್ಣ, ಹೊಲದಲ್ಲಿರುವ ಕಡಲೆಗೆ ಕ್ರಿಮಿನಾಶಕ ಹೊಡೆಯಲು ನೀರು ತರಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಅವಮಾನಿಸಿದ್ದ ರೈತನ ಮನೆಗೆ ಹೊಸ ಗೂಡ್ಸ್ ಜೀಪ್ ಕಳುಹಿಸಿ ಶುಭಕೋರಿದ ಮಹೀಂದ್ರಾ

ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *