ಹೈದರಾಬಾದ್: ಒಂದನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಮೂತ್ರ ಮಿಶ್ರಿತ ಜ್ಯೂಸ್ ಕುಡಿಯುವಂತೆ ಅಮಾನವೀಯ ಶಿಕ್ಷೆ ನೀಡಿರುವ ಘಟನೆ ಆಂಧ್ರ ಪ್ರದೇಶ ರಾಜ್ಯದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ವಿದ್ಯಾರ್ಥಿಗೆ ಅಮಾನವೀಯ ಶಿಕ್ಷೆ ನೀಡಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‍ಪಿಆರ್ ವಿದ್ಯಾ ಕಾನ್ಸಪ್ಟ್ ಶಾಲೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ಶಾಲೆಯ ದೈಹಿಕ ಶಿಕ್ಷಕ ವಿಜಯ್ ಕುಮಾರ್ ಬಂಧಿತ ಶಿಕ್ಷಕ.
Advertisement
ಶಾಲೆಯಲ್ಲಿ ನಡೆದಿದ್ದೇನು?: ಒಂದನೇ ತರಗತಿಯ ವಿದ್ಯಾರ್ಥಿಯೊಬ್ಬ ತಮಾಷೆಗಾಗಿ ತನ್ನ ಸಹಪಾಠಿಯ ಹಣ್ಣಿನ ಜ್ಯೂಸ್‍ನಲ್ಲಿ ಮೂತ್ರವನ್ನು ಬೆರೆಸಿದ್ದಾನೆ. ತನ್ನ ಸಹಪಾಠಿ ಜ್ಯೂಸ್ ಕುಡಿಯುವಾಗ ಅದರಲ್ಲಿ ಮೂತ್ರ ಮಿಕ್ಸ್ ಆಗಿದೆ ಕುಡಿಯಬೇಡ ಅಂತಾ ಹೇಳಿದ್ದಾನೆ. ಕೂಡಲೇ ಜ್ಯೂಸ್ ತಂದಿದ್ದ ವಿದ್ಯಾರ್ಥಿನಿ ದೈಹಿಕ ಶಿಕ್ಷಕ ವಿಜಯ್ ಕುಮಾರ್‍ಗೆ ದೂರು ನೀಡಿದ್ದಾಳೆ.
Advertisement
Advertisement
ವಿಷಯ ತಿಳಿದ ವಿಜಯ್ ಕುಮಾರ್ ಮೂತ್ರ ಮಿಕ್ಸ್ ಆಗಿದ್ದ ಜ್ಯೂಸ್ ಕುಡಿಯುವಂತೆ ಒತ್ತಾಯಿಸಿದ್ದಾರೆ. ವಿಷಯ ತಿಳಿದು ಶಾಲೆಗೆ ಬಂದ ಪೋಷಕರ ಮುಂದೆಯೂ ವಿಜಯ್ ಕುಮಾರ್ ತಾನು ನೀಡಿರುವ ಶಿಕ್ಷೆಯನ್ನು ಸಮರ್ಥಿಸಿಕೊಂಡಿದ್ದಾನೆ. ವಿಜಯ್ ಕುಮಾರ್ ವಿರುದ್ಧ ದೂರು ದಾಖಲಾದ ಬಳಿಕ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.
Advertisement
ಶಿಕ್ಷಕನನ್ನು ವಿಚಾರಣೆ ನಡೆಸಿದ ಬಳಿಕ ಐಪಿಸಿ ಸೆಕ್ಷನ್ 270 (ಜೀವಕ್ಕೆ ಅಪಾಯವಾಗುವಂತಹ ಹಾನಿಕಾರಕ ಕ್ರಿಯೆಗೆ ಪ್ರಚೋದನೆ) ಮತ್ತು ಸೆಕ್ಷನ್ 75 ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಪಿ.ಎ.ಸೂರ್ಯನಾರಾಯಣ ರೆಡ್ಡಿ ಹೇಳಿದ್ದಾರೆ.