ಹಾವೇರಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಶಿಕ್ಷಕ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಪರಮೇಶ್ ಐರಣಿ (45) ಆರೋಪಿ. ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ಈತ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹಾವೇರಿ ಜಿಲ್ಲೆ ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಓಲೈಕೆ ರಾಜಕಾರಣ ಗೊತ್ತಿಲ್ಲ: ಇಬ್ಬರು ಮಾಜಿ ಸಿಎಂಗಳಿಗೆ ಕುಟುಕಿದ ಬೊಮ್ಮಾಯಿ
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾದಾಗಿನಿಂದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ. ವಿದ್ಯಾರ್ಥಿನಿ ಪರೀಕ್ಷೆ ಬರೆಯುತ್ತಿದ್ದ ಪರೀಕ್ಷಾ ಕೇಂದ್ರದ ಸುಪರ್ ವೈಸರ್ ಆಗಿದ್ದ ಶಿಕ್ಷಕ ಪರಮೇಶ್. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚಿಗೆ ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ್ದನು. ಏಪ್ರೀಲ್ 8ರಂದು ನಡೆದಿದ್ದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!
ಪರಮೇಶ್, ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿದ್ದನು. ಶಿಕ್ಷಕನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಾಯಿ ಗರ್ಭದಷ್ಟೇ ಭೂಗರ್ಭಕ್ಕೆ ಮಹತ್ವವಿದೆ- ಮಣ್ಣು ಉಳಿಸಿ ಅಭಿಯಾನಕ್ಕೆ ಬೊಮ್ಮಾಯಿ ಚಾಲನೆ