ತಿರುವನಂತಪುರಂ: 12 ವರ್ಷದ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರ ಎಸಗಿದ್ದು, 7ನೇ ತರಗತಿ ವಿದ್ಯಾರ್ಥಿನಿ ಇದೀಗ ಗರ್ಭಿಣಿಯಾಗಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.
ಕುಟುಂಬಸ್ಥರು ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ 30 ವರ್ಷದ ಶಾಲಾ ಶಿಕ್ಷಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದಾರೆ.
ವಿದ್ಯಾರ್ಥಿನಿ ಮೇಲೆ ಸತತ ಎರಡು ತಿಂಗಳಿಂದ ಅತ್ಯಾಚಾರ ಮಾಡಲಾಗಿದ್ದು, ಈ ಕುರಿತು ಕುಟುಂಬಸ್ಥರಿಗೆ ತಿಳಿದಿಲ್ಲ. ತಪಾಸಣೆಗಾಗಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ನಂತರ ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಕುರಿತು ತಿಳಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ವಿದ್ಯಾರ್ಥಿನಿಯ ಹೇಳಿಕೆ ಪಡೆದಿದ್ದು, ತನ್ನ ಶಿಕ್ಷಕನೇ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾಳೆ. ನಾಪತ್ತೆಯಾದ ಶಿಕ್ಷಕನ ಮೇಲೆ ಅತ್ಯಾಚಾರ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.