Connect with us

Crime

ಡ್ರಾಪ್ ಕೊಡೋದಾಗಿ ಹೇಳಿ ಕಾಡಿಗೆ ಕರ್ಕೊಂಡು ಹೋಗಿ ಶಿಕ್ಷಕನಿಂದ ರೇಪ್

Published

on

-ಸಾಮಾಜಿಕ ಜಾಲತಾಣಕ್ಕೆ ಫೋಟೋ ಅಪ್ಲೋಡ್

ಭುವನೇಶ್ವರ: ಶಾಲಾ ಶಿಕ್ಷಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ಕಾಲೇಜು ಹುಡುಗಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯ ಮುರಿಬಾಹಲ್ ಪ್ರದೇಶದಲ್ಲಿ ನಡೆದಿದೆ.

ಈ ಕುರಿತು ಸಂತ್ರಸ್ತೆಯ ಕುಟುಂಬ ಸದಸ್ಯರು ಮುರಿಬಾಹಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಅತ್ಯಾಚಾರ ಎಸಗಿದ್ದಲ್ಲದೆ ಅತ್ಯಾಚಾರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಅಪ್ಲೋಡ್ ಮಾಡಿದ್ದಾನೆ. ಆರೋಪಿಯನ್ನು ಗಾನೋ ಸೆಲಾಮಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?
ಸಂತ್ರಸ್ತೆ ಫೆಬ್ರವರಿ 6 ರಂದು ಕಾಲೇಜಿಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದಳು. ಆಗ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಗಾನೋ ಸೆಲಾಮಾ ಬಂದು ತಾನು ಕಾಲೇಜಿಗೆ ಡ್ರಾಪ್ ಮಾಡುತ್ತೇನೆಂದು ಹೇಳಿ ಕೂರಿಸಿಕೊಂಡಿದ್ದಾನೆ. ನಂತರ ಕಾಲೇಜಿಗೆ ಡ್ರಾಪ್ ಮಾಡುವ ಬದಲು ಆಕೆಯನ್ನು ಕಾಡಿನೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಅತ್ಯಾಚಾರದ ಫೋಟೋಗಳನ್ನು ತೆಗೆದುಕೊಂಡಿದ್ದಾನೆ. ಜೊತೆಗೆ ಈ ಘಟನೆಯ ಬಗ್ಗೆ ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸ್ವಲ್ಪ ದಿನದ ನಂತರ ಆರೋಪಿ ಅತ್ಯಾಚಾರದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದಾನೆ. ಆ ಫೋಟೋ ವೈರಲ್ ಆದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ನಂತರ ಕುಟುಂಬಸ್ಥರು ಈ ಕುರಿತು ದೂರು ದಾಖಲಿಸಿದ್ದಾರೆ.

ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದೇನೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧಕಾರ್ಯ ನಡೆಸುತ್ತಿದ್ದೇವೆ. ಸದ್ಯಕ್ಕೆ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *