ಕಲಬುರಗಿ: ಶಾಲಾ ಬಾಲಕನ ಮೇಲೆ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಾಶುಮೀಯಾ(32) ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕ್ಷಕ. ಪಾಶುಮೀಯಾ 12 ವರ್ಷದ ವಿದ್ಯಾರ್ಥಿಗೆ ಐಸ್ ಕ್ರೀಂ ನೀಡುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದನು. ಈ ವೇಳೆ ಶಿಕ್ಷಕ ಮನೆಯಲ್ಲಿ ಬಾಲಕನ ಮೇಲೆ ಪಾಶುಮೀಯಾ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಶಿಕ್ಷಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವಿಷಯವನ್ನು ಪೋಷಕ ಬಳಿ ಹೇಳಿಕೊಂಡಿದ್ದಾನೆ. ಪೋಷಕರು ಬಾಲಕನನ್ನು ಸೇಡಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಬಾಲಕ ಈಗ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಳಿಕ ಪೋಷಕರು ಮಳಖೇಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಬಗ್ಗೆ ಮಳಖೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪಾಶುಮಿಯಾಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv