ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಘಾತಕಾರಿ ಘಟನೆಗಳು ನಡೆಯುವುದು ಮುಂದುವರಿಯುತ್ತಲೇ ಇವೆ. 5ನೇ ತರಗತಿಯ ಬಾಲಕಿಯೊಬ್ಬಳನ್ನು (Girl) ಆಕೆಯ ಶಿಕ್ಷಕಿಯೇ (Teacher) ಕತ್ತರಿಯಿಂದ (Scissors) ಚುಚ್ಚಿ, ಬಾಲ್ಕನಿಯಿಂದ (Balcony) ಎಸೆದಿರುವ ಕ್ರೂರ ಘಟನೆ ಶುಕ್ರವಾರ ನಡೆದಿದೆ.
ದೆಹಲಿಯ ನಿಗಮ್ ಬಾಲಿಕಾ ವಿದ್ಯಾಲಯದಲ್ಲಿ ಇಂದು ಬೆಳಗ್ಗೆ 11:15ರ ವೇಳೆಗೆ ಈ ಆಘಾತಕಾರಿ ಘಟನೆ ನಡೆದಿದೆ. ಬಾಲಕಿ ವಂದನಾ ಮೇಲೆ ಆಕೆಯ ಶಿಕ್ಷಕಿ ದಾಳಿ ನಡೆಸಿ, ಬಾಲ್ಕನಿಯಿಂದ ಹೊರ ದಬ್ಬಿದ್ದು, ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.
ಮೂಲಗಳ ಪ್ರಕಾರ ಆರೋಪಿ ಶಿಕ್ಷಕಿ ಗೀತಾ ದೇಶ್ವಾಲ್ ಬಾಲಕಿ ಮೇಲೆ ಕತ್ತರಿಯಿಂದ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಶಾಲೆಯ ಮತ್ತೊಬ್ಬ ಶಿಕ್ಷಕಿ ಮಧ್ಯಪ್ರವೇಶಿಸಿ ಬಾಲಕಿಯನ್ನು ಹೊಡೆಯುವುದನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಈ ವೇಳೆ ಬಾಲಕಿ ಮೊದಲ ಮಹಡಿಯ ಬಾಲ್ಕನಿಯಿಂದ ಕೆಳಕ್ಕೆ ಬಿದ್ದಿದ್ದಾಳೆ. ಇದನ್ನೂ ಓದಿ: ಇಎಂಐ ಕಟ್ಟು ಎಂದಿದ್ದಕ್ಕೆ ಖಾಸಗಿ ಫೈನಾನ್ಸ್ ಕಂಪನಿಯ ಉದ್ಯೋಗಳ ಮೇಲೆ ಬಿಸಿ ಎಣ್ಣೆ ಎರಚಿದ
ತಕ್ಷಣವೇ ಸ್ಥಳೀಯರು ಒಟ್ಟಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣವೇ ಬಾರಾ ಹಿಂದೂ ಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಪೊಲೀಸರು ಆರೋಪಿ ಶಿಕ್ಷಕಿಯನ್ನು ಬಂಧಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನಾಧರಿಸಿ ಶಿಕ್ಷಕಿ ವಿರುದ್ಧ ಪೊಲೀಸರು ಭಾರತೀಯ ದಂಡಸಂಹಿತೆ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮದ್ಯ ಕುಡಿದು ಸತ್ತವರಿಗೆ ಪರಿಹಾರ ಕೊಡಲ್ಲ – ಸಿಎಂ ನಿತೀಶ್ ಕುಮಾರ್