ಮೈಸೂರು: ಹಳೆಯ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನ ಕಾಮದಾಟ ಬಯಲಾದ ಹಿನ್ನೆಲೆಯಲ್ಲಿ ಶಿಕ್ಷಕ ಸಿದ್ದರಾಜುನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಿದ್ದರಾಜು ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ಆದರೆ ಶಿಕ್ಷಕ ಯುವತಿಯೊಂದಿಗಿದ್ದ ಖಾಸಗಿ ಕ್ಷಣದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಅಲ್ಲದೇ ಶಿಕ್ಷಕ ಸಿದ್ದರಾಜು ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡಿರುವುದು ಹಾಗೂ ವಿದ್ಯಾರ್ಥಿಗಳಿಂದ ತನ್ನ ವೈಯಕ್ತಿಕ ಕೆಲಸಗಳನ್ನು ಮಾಡಿಸಿಕೊಂಡಿರುವ ಸಂಗತಿ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: 20ರ ವಿದ್ಯಾರ್ಥಿನಿ ಜೊತೆ 58ರ ಶಿಕ್ಷಕನ ರಾಸಲೀಲೆ – 2 ಕಾಲುಗಳ ಸ್ವಾಧೀನ ಕಳೆದುಕೊಂಡಿದ್ರೂ ಕಾಮದಾಟ
ಮಹಿಳಾ ಶಿಕ್ಷಕರಿಗೆ ಮಾನಸಿಕ ಕಿರುಕುಳ ಸೇರಿದಂತೆ ಹಲವಾರು ವಿಚಾರಗಳ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದರಾಜುನನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.
ಏನಿದು ಪ್ರಕರಣ?
ಕಾಮುಕ ಶಿಕ್ಷಕನಿಗೆ ಈಗಾಗಲೇ ಎರಡು ಮದುವೆಯಾಗಿದೆ. ಅಲ್ಲದೇ ವಿದ್ಯಾರ್ಥಿನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ. ವಿದ್ಯಾರ್ಥಿನಿ ಜೊತೆ ಕಾಮದಾಟ ಮಾಡುವಾಗ ಆತನೇ ಫೋಟೋ ಕ್ಲಿಕ್ಕಿಸಿಕೊಂಡಿದ್ದನು. ನಂತರ ಸಂಬಂಧ ಹೊಂದಿದ್ದ ವಿದ್ಯಾರ್ಥಿನಿಗೆ ಫೋಟೋ ಕಳುಹಿಸುತ್ತಿದ್ದನು. ಆದರೆ ಆಕಸ್ಮಿಕವಾಗಿ ಬೇರೆ ವಾಟ್ಸಪ್ ಗ್ರೂಪ್ಗೆ ಫೋಟೋ ಅಪ್ಲೋಡ್ ಮಾಡಿದ್ದಾನೆ. ಆಗ ಕಾಮುಕ ಶಿಕ್ಷಕನ ಅಸಲಿ ಬಣ್ಣ ಬಯಲಾಗಿತ್ತು.
ಧನುರ್ವಾಯು ರೋಗದಿಂದ ಎರಡು ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದರೂ ಯುವತಿಯೊಂದಿಗೆ ಕಾಮದಾಟ ನಡೆಸಿದ್ದನು. ಅಲ್ಲದೇ ದಿವಂಗತ ಡಿ.ಟಿ.ಜಯಕುಮಾರ್ ಮಂತ್ರಿಯಾಗಿದ್ದ ಅವಧಿಯಲ್ಲಿ ಆಪ್ತ ಸಹಾಯಕನಾಗಿದ್ದನು. ಸುಮಾರು 25 ವರ್ಷಗಳಿಂದ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕನಾಗಿದ್ದು, ಕಾಮುಕ ಸಿದ್ದರಾಜು ವರ್ತನೆಯಿಂದ ಗ್ರಾಮಸ್ಥರು ಬೇಸತ್ತಿದ್ದರು. ಹೀಗಾಗಿ ಕಾಮುಕ ಶಿಕ್ಷಕ ಸಿದ್ದರಾಜುನನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ನಂಜನಗೂಡು ತಾಲೂಕಿನ ರಾಂಪುರದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು.