ಕಲಬುರಗಿ: ಅಚ್ಚುಮೆಚ್ಚಿನ ಶಿಕ್ಷಕರು ತಮ್ಮ ಶಾಲೆಯಿಂದ ವರ್ಗಾವಣೆಗೊಂಡು ತೆರಳುತ್ತಿರುವಾಗ ವಿದ್ಯಾರ್ಥಿಗಳು ಹಾಗೂ ಇತರ ಸಹೋದ್ಯೋಗಿ ಶಿಕ್ಷಕರು ಗಳಗಳನೆ ಕಣ್ಣೀರಿಟ್ಟ ಪ್ರಸಂಗ ತಾಲೂಕಿನ ಲಿಂಗಂಪಲ್ಲಿ ಗ್ರಾಮದಲ್ಲಿ ನಡೆಯಿತು.
Advertisement
ಲಿಂಗಂಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರಾದ ರಾಘವೇಂದ್ರ ಕುಲಕರ್ಣಿ ಅವರು ವರ್ಗಾವಣೆಯಾದ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಸಹೋದ್ಯೋಗಿಯಾಗಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಕಣ್ಣೀರಿನ ವಿದಾಯ ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಿಂದ ಮನೆಗಳತ್ತ ಮುಖಮಾಡಿದ ರೈತರು- ಪೊಲೀಸರಿಂದ ಬ್ಯಾರಿಕೇಡ್ ತೆರವು
Advertisement
Advertisement
ಮಕ್ಕಳು ಹಾಗೂ ಸಹೋದ್ಯೋಗಿಗಳು ಕಣ್ಣೀರಿಡುತ್ತ ಕಾಲಿಗೆ ಬಿದ್ದು, ನಮಸ್ಕರಿಸುತ್ತಿರುವುದನ್ನು ಕಂಡ ಶಿಕ್ಷಕ ರಾಘವೇಂದ್ರ ಕುಲಕರ್ಣಿ ಅವರೂ ಕೂಡ ಭಾವುಕರಾದರು. ಸಹೋದ್ಯೋಗಿಗಳನ್ನು ತಬ್ಬಿಕೊಂಡು ಅವರೂ ಕೂಡ ಅಳುತ್ತಿರುವ ವೀಡಿಯೋ ವೈರಲ್ ಆಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಇದನ್ನೂ ಓದಿ: ಮತದಾನ ಮಾಡಿದ ಸದಸ್ಯರಿಂದ ಮತ ಪತ್ರ ಬಹಿರಂಗ- ಚುನಾವಣಾಧಿಕಾರಿಗೆ ದೂರು