Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಕರ ವೃತ್ತಿ ಸಾಮಾಜಿಕ ಜವಾಬ್ದಾರಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿಕ್ಷಕರ ವೃತ್ತಿ ಸಾಮಾಜಿಕ ಜವಾಬ್ದಾರಿ: ಸಿದ್ದರಾಮಯ್ಯ

Bengaluru City

ಶಿಕ್ಷಕರ ವೃತ್ತಿ ಸಾಮಾಜಿಕ ಜವಾಬ್ದಾರಿ: ಸಿದ್ದರಾಮಯ್ಯ

Public TV
Last updated: September 5, 2024 4:27 pm
Public TV
Share
2 Min Read
CM SIDDARAMAIAH TEACHERS DAY
SHARE

ಬೆಂಗಳೂರು: ರೈತರು, ಶಿಕ್ಷಕರು, ಸೈನಿಕರು ದೇಶದ ನಿರ್ಮಾತೃಗಳು. ದೇಶದ ಅಭಿವೃದ್ಧಿ ಮತ್ತು ವ್ಯಕ್ತಿತ್ವ ರೂಪಿಸುವವರು ಶಿಕ್ಷಕರು. ಈ ವೃತ್ತಿ ಸಾಮಾಜಿಕ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸರ್ಕಾರದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಿಎಂ, ಶಿಕ್ಷಕ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಇದನ್ನೂ ಓದಿ: ದರ ಏರಿಕೆ ನಿಯಂತ್ರಿಸಲು ಕಡಿಮೆ ಬೆಲೆಗೆ ಈರುಳ್ಳಿ ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ

ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ಡಾ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತೀ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಅನ್ನಿಸುತ್ತದೆ ಎಂದರು. ಇದನ್ನೂ ಓದಿ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ – ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ. ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು. ಇದನ್ನೂ ಓದಿ: FIRE ಮನವಿಯನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ : ಸಿಎಂ

ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹೋಟೆಲ್‌ಗೆ ನುಗ್ಗಿದ ಟಿಪ್ಪರ್ – ಇಬ್ಬರ ದುರ್ಮರಣ

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರು ಹಣೆಬರಹ ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ. ಸಾವಿತ್ರಿಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ತಲೆ ಓಪನ್ – ‘ಡಿ’‌ ಗ್ಯಾಂಗ್‌ ಭೀಕರ ಕ್ರೌರ್ಯ ಫೋಟೊಗಳಿಂದ ಬಹಿರಂಗ

ಕಾರ್ಯಕ್ರಮದಲ್ಲಿ 20 ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲೆಯ 11 ಶಿಕ್ಷಕರು, ಪಿಯುಸಿ ವಿಭಾಗದಲ್ಲಿ ಒಬ್ಬ ಪ್ರಾಂಶುಪಾಲರು, 9 ಜನ ಉಪನ್ಯಾಸಕರಿಗೆ ಉತ್ತಮ ಶಿಕ್ಷಕ ಮತ್ತು ಉಪನ್ಯಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಚಿವ ಮಧು ಬಂಗಾರಪ್ಪ, ಡಾ. ಸುಧಾಕರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಶಾಲಾ-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

TAGGED:bengalurucm siddaramaiahTeachers Dayಡಾ. ಸುಧಾಕರ್ಬೆಂಗಳೂರುಮಧು ಬಂಗಾರಪ್ಪಶಿಕ್ಷಕರ ದಿನಾಚರಣೆಸರ್ವಪಲ್ಲಿ ರಾಧಾಕೃಷ್ಣನ್ಸಾವಿತ್ರಿಬಾಯಿ ಫುಲೆಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

01 16
Latest

Video | ಡಿಕೆಶಿ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕಾಫ್‌ – ಆತಂಕಕ್ಕೆ ಒಳಗಾದ ಪ್ರಯಾಣಿಕರು!

Public TV
By Public TV
2 hours ago
Petrol 4
Bagalkot

ಕೊಲ್ಲಿ ಯುದ್ಧದ ಮಧ್ಯೆ ಕರ್ನಾಟಕದಲ್ಲಿ ತೈಲಾತಂಕ – ಡ್ರಮ್, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡ ಜನ

Public TV
By Public TV
2 hours ago
IPL RCB
Bengaluru City

Breaking | 17 ಸಾವಿರ ಕೋಟಿಗೆ ಆರ್‌ಸಿಬಿ ಸೇಲ್‌

Public TV
By Public TV
2 hours ago
Kalaburagi Youth Death Due To Thunder
Districts

ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

Public TV
By Public TV
2 hours ago
Haveri Tomb Of Early Humans Found In Ranebennur
Districts

ರಾಣೇಬೆನ್ನೂರಿನಲ್ಲಿ 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ

Public TV
By Public TV
3 hours ago
Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?