ಬೆಂಗಳೂರು: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಕೌನ್ಸಿಲಿಂಗ್‍ನ್ನು ತಡೆ ಹಿಡಿಯುವಂತೆ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.
ವರ್ಗಾವಣೆಯಲ್ಲಿರುವ ಗೊಂದಲ ನಿವಾರಣೆಗಾಗಿ ವರ್ಗಾವಣೆ ಪ್ರಕ್ರಿಯೆ ತಡೆ ಹಿಡಿಯಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತಡೆ ಹಿಡಿಯಲು ನೂತನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ನಾಳೆಯಿಂದಲೇ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಡೆಯಬೇಕಿತ್ತು.
Advertisement
Advertisement
ಶಿಕ್ಷಕರ ಕಡ್ಡಾಯ ವರ್ಗಾವಣೆ ಕುರಿತು ಅನೇಕ ಶಿಕ್ಷಕರು, ವಿಶೇಷವಾಗಿ ಶಿಕ್ಷಕಿಯರು ಮನವಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ವಿವರಿಸಿ ಕೆಲವು ನ್ಯಾಯಯುತ ಪ್ರಸ್ತಾವನೆಗಳನ್ನು ನನ್ನ ಮುಂದೆ ಇಟ್ಟಿದ್ದಾರೆ. ಈ ವರ್ಗಾವಣೆ ವ್ಯವಸ್ಥೆಯಲ್ಲಿರುವ ಕೆಲವು ದೋಷಗಳನ್ನೂ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ಕೆಲ ಗೊಂದಲಗಳನ್ನು ನಿವಾರಿಸಿ, ಎಲ್ಲರಿಗೂ ಅನುಕೂಲವಾಗುವ ರೀತಿಯ ವ್ಯವಸ್ಥೆ ಕುರಿತು ಚಿಂತನೆ ಮತ್ತು ಪ್ರಯತ್ನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
ಕೇವಲ ಕೆಲದಿನಗಳ ಮಟ್ಟಿಗೆ ಮಾತ್ರ ಹಾಲಿ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಬಹಳ ಬೇಗ ಸುಧಾರಿತ ವರ್ಗಾವಣೆ ಪ್ರಕ್ರಿಯೆ ಜಾರಿ ತರಲು ಕ್ರಮ ಕೈಗೊಳ್ಳಲಾಗುತ್ತದೆ. ಯಾರಿಗೂ ಆತಂಕ ಬೇಡ ಎಂದು ನೂತನ ಶಿಕ್ಷಣ ಸಚಿವರು ತಿಳಿಸಿದ್ದಾರೆ.