ಬೀದರ್: ನಗರದ ಖಾಸಗಿ ಕಾಲೇಜೊಂದರಲ್ಲಿ ಮಾರ್ಚ್ 9ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳೆ ಶಿಕ್ಷಕರೇ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕಾರ ನೀಡಿದ ವಿಚಾರವೊಂದು ಬೆಳಕಿಗೆ ಬಂದಿದೆ.
ಮಾರ್ಚ್ 9ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಕಾಲೇಜಿನ ಪ್ರಾಂಶುಪಾಲರು, ಪರೀಕ್ಷೆ ನಿರ್ವಹಿಸುವ ಅಧಿಕಾರಿಗಳು, ಕಾಲೇಜಿನ ಸಿಬ್ಬಂದಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕಾರ ಮಾಡುತಿರುವ ಈ ದೃಶ್ಯಗಳು ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.
Advertisement
Advertisement
ಬೀದರ್‍ನ ಹೊರವಲಯದಲ್ಲಿರುವ ನೂರ ಕಾಲೇಜಿನ ಕೋಣೆ ನಂಬರ್ 1, ಸಿಸಿ ಕ್ಯಾಮರಾ 10 ರಲ್ಲಿ ನಕಲಿಗೆ ಸಿಬ್ಬಂದಿಗಳು ಪ್ರೋತ್ಸಾಹ ಮಾಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ವ್ಯಕ್ತಿಯೊಬ್ಬ ರಾಜಾರೋಷವಾಗಿ ವಿದ್ಯಾರ್ಥಿನಿಗೆ ಮೊಬೈಲ್ ನೀಡಿ ನಕಲು ಮಾಡಲು ಸಹಕಾರ ಮಾಡುತ್ತಿದ್ದು ಜೊತೆಗೆ ವಾಟರ್‍ಬಾಯಿ ಕೂಡ ವಿದ್ಯಾರ್ಥಿಗಳಿಗೆ ಚೀಟಿಗಳನ್ನು ನೀಡಿ ಹೋಗುತ್ತಿರುವ ದೃಶ್ಶ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
Advertisement
ಚೀಟಿಗಳನ್ನು ನೀಡಿ ನಕಲು ಮಾಡಲು ಪ್ರೋತ್ಸಾಹ ಮಾಡುತ್ತಿರುವಾಗ ಕಾಲೇಜಿನ ಆಡಳಿತ ಮಂಡಳಿ ಎಲ್ಲಿ ಹೋಗಿದ್ರು ಎಂಬ ಹಲವು ಅನುಮಾನಗಳು ಕಾರಣವಾಗಿದೆ. ಈಗಾಗಲೇ ಈ ವಿಚಾರ ಜಿಲ್ಲಾಧಿಕಾಗಳ ಗಮನಕ್ಕೆ ಬಂದಿದ್ದು ಡಿಡಿಪಿಯೂ ಮೂಲಕ ಗಾಂಧಿಗಾಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಪಿಯು ಬೋರ್ಡ್ ಈ ಬಗ್ಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತೆ ಎಂಬುದನ್ನು ಕಾದು ನೋಡಬೇಕು.