ಬೀದರ್ : ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ಶಿಕ್ಷಕರನ್ನು ತಬ್ಬಿಕೊಂಡು ವಿದ್ಯಾರ್ಥಿಗಳು ಬಿಕ್ಕಿ, ಬಿಕ್ಕಿ ಅತ್ತ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬೀರಿ ಗ್ರಾಮದಲ್ಲಿ ನಡೆದಿದೆ.
ಗುರುವನ್ನು ಪೂಜ್ಯಸ್ಥಾನದಲ್ಲಿಟ್ಟು ಪೂಜಿಸಲಾಗುತ್ತದೆ. ಸಾಮಾನ್ಯವಾಗಿ ತಂದೆ, ತಾಯಿಯ ನಂತರ ಗುರುವಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಬೀರಿ ಗ್ರಾಮದ ಸರ್ಕಾರಿ ಫ್ರೌಡ ಶಾಲೆಯ ಶಿಕ್ಷಕರಾಗಿದ್ದ ವಿಜಯಕುಮಾರ್ ಕುಲಕರ್ಣಿ ನಿವೃತಿಯಾಗಿದ್ದು ಹಾಗೂ ಯುವರಾಜ ಎಂಬ ಶಿಕ್ಷಕರು ಕೂಡಾ ವರ್ಗಾವಣೆಗೊಂಡ ಹಿನ್ನೆಲೆ ವಿದ್ಯಾರ್ಥಿಗಳು ಇಬ್ಬರು ಶಿಕ್ಷಕರನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ದೆಹಲಿಯತ್ತ ತೆರಳುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ
Advertisement
Advertisement
ಹೂವಿನ ಹಾರ ಹಾಕಿ, ಗ್ರಾಮದಲ್ಲಿ ಭವ್ಯ ಮೆರವಣಿಗೆ ಮಾಡಿ ಗೌರವ ಸೂಚಿಸಿದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬೀಳ್ಕೊಡುವ ಕೊನೆಯ ಗಳಿಗೆಯಲ್ಲಿ ಇಬ್ಬರು ಶಿಕ್ಷಕರನ್ನು ತಬ್ಬಿಕೊಂಡು ವಿದ್ಯಾರ್ಥಿಗಳು ಬಿಕ್ಕಿ, ಬಿಕ್ಕಿ ಅತ್ತರು. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಇದನ್ನೂ ಓದಿ: ಶೀಘ್ರದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್