Connect with us

Cricket

ದ.ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಧೋನಿ, ಬುಮ್ರಾಗೆ ವಿಶ್ರಾಂತಿ

Published

on

– ತಂಡ ಸೇರಿದ ಹಾರ್ದಿಕ್ ಪಾಂಡ್ಯ

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರ ಪಟ್ಟಿ ಪ್ರಕಟವಾಗಿದ್ದು, ಮಾಜಿ ನಾಯಕ ಎಂ.ಎಸ್.ಧೋನಿ, ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲಾಗಿದೆ.

ವಿಂಡೀಸ್ ಸರಣಿಯ ವೇಳೆ ವಿಶಾಂತ್ರಿಯಲ್ಲಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದಾರೆ. ಇತ್ತ ಮಹೇಂದ್ರ ಸಿಂಗ್ ಧೋನಿ ಅವರಿಗೆ ವಿಶ್ರಾಂತಿ ನೀಡಿ, ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್ ಅವರನ್ನು ಮುಂದುವರಿಸಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧ ಮೂರು ಮಾದರಿಯ ಪಂದ್ಯದಲ್ಲಿಯೂ ತಂಡವನ್ನು ವಿರಾಟ್ ಕೊಹ್ಲಿ ಸಮರ್ಥವಾಗಿ ಮುನ್ನಡೆಸಿದ್ದಾರೆ. ಈ ಪ್ರಸಾದ ಬಳಿಕ ಕೊಹ್ಲಿ ವಿಶ್ರಾಂತಿ ಪಡೆಯದೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲೂ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಹಾರ್ದಿಕ್ ಪಾಂಡ್ಯ ಸ್ಥಾನ ನೀಡಿರು ಆಯ್ಕೆ ಸಮೀತಿಯು ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಿದೆ. ಉಳಿದಂತೆ ವೆಸ್ಟ್ ಇಂಡೀಸ್ ಸರಣಿಯಲ್ಲಿದ್ದ ಆಟಗಾರರಾದ ಶಿಖರ್ ಧವನ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಕೃಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ.

ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕೃಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಮತ್ತು ನವದೀಪ್ ಸೈನಿ.