CricketLatestMain PostSports

ಭಾರತ-ದಕ್ಷಿಣ ಆಫ್ರಿಕಾ 2ನೇ ಪಂದ್ಯಕ್ಕೆ ಮಳೆ ಅಡ್ಡಿ?

ಮುಂಬೈ: ಭಾರತ ಹಾಗೂ ದಕ್ಷಿಣ ಆಫ್ರಿಕಾ (South Africa) ವಿರುದ್ಧದ ಟಿ20 (T20) ಸರಣಿಯ 2ನೇ ಪಂದ್ಯಕ್ಕೆ ಇತ್ತಂಡಗಳು ಸಜ್ಜಾಗಿವೆ. ಈ ನಡುವೆಯೇ ಹವಾಮಾನ ಇಲಾಖೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಪಂದ್ಯದ ವೇಳೆ ಗುವಾಹಟಿಯಲ್ಲಿ 28 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ. ಆದರೆ ಶೇ.99 ರಷ್ಟು ಮೋಡ ಕವಿಯುವ ಸಾಧ್ಯತೆಯಿದ್ದು, ಸಣ್ಣ ಪ್ರಮಾಣದ ಮಳೆಯಾಗುವ (Rain) ಆತಂಕವೂ ಇದೆ. ಶೇ.6ರಷ್ಟು ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದನ್ನೂ ಓದಿ: T20 ಕ್ರಿಕೆಟ್‍ನಲ್ಲಿ ಸೂರ್ಯನದ್ದೇ ಪವರ್ – ಧೋನಿ, ಕೊಹ್ಲಿ ಸಾಲಿನಲ್ಲಿ ಮಿಂಚಲು ರೆಡಿ

ಈ ಬಗ್ಗೆ ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ಪ್ರತಿಕ್ರಿಯಿಸಿದ್ದು, ಹವಾಮಾನ ವೈಪರಿತ್ಯ ಎದುರಿಸಲು ತಮ್ಮ ತಂಡ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಭರವಸೆ ನೀಡಿದೆ.

ಗುವಾಹಟಿಯ ಡಾ. ಭೂಪೆನ್ ಹಜಾರಿಕಾ ಸ್ಟೇಡಿಯಂನಲ್ಲಿ 2ನೇ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಅಮೋಘ ಗೆಲುವು ಸಾಧಿಸಿದ್ದು, ಸರಣಿಯಲ್ಲಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದೀಗ 2ನೇ ಪಂದ್ಯವನ್ನೂ ಗೆದ್ದು ಅಂತಿಮ ಪಂದ್ಯಕ್ಕೂ ಮುನ್ನವೇ ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದೆ. ಇದನ್ನೂ ಓದಿ: ಟೀಂ ಇಂಡಿಯಾದಿಂದ ಬುಮ್ರಾ ಔಟ್ ಸಿರಾಜ್ ಇನ್

ತಿರುವನಂತಪುರಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬೌಲಿಂಗ್‌ನಲ್ಲಿ ಅಬ್ಬರಿಸಿತ್ತು. ಟೀಂ ಇಂಡಿಯಾ ವೇಗಿಗಳಾದ ದೀಪಕ್ ಚಹಾರ್ ಹಾಗೂ ಅರ್ಷ್‌ದೀಪ್‌ ಸಿಂಗ್ ತಮ್ಮ ಮಾರಕ ಬೌಲಿಂಗ್ ದಾಳಿಯಿಂದ ಮೊದಲ ಮೂರು ಓವರ್‌ಗಳಲ್ಲೇ 5 ವಿಕೆಟ್‌ಗಳನ್ನ ಉರುಳಿಸಿದರು. ಬ್ಯಾಟಿಂಗ್ ಕ್ರೀಸ್‌ನಲ್ಲಿ ಅಬ್ಬರಿಸಿದ ಉಪನಾಯಕ ಕೆ.ಎಲ್‌ರಾಹುಲ್‌ (KL Rahul) ಹಾಗೂ ಸೂರ್ಯಕುಮಾರ್‌ ಯಾದವ್‌ (Suryakumar Yadav) ಭರ್ಜರಿ ಅರ್ಧ ಶತಕಗಳ ಆಟವಾಡಿದರು. ಇದರಿಂದಾಗಿ ಟೀಂ ಇಂಡಿಯಾ 8 ವಿಕೆಟ್‌ಗಳ ಸುಲಭ ಜಯ ಸಾಧಿಸಿತು.

ಇದೀಗ 2ನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದು, ಹರಿಣಗಳ ಪಡೆ ಈ ಕದನಕ್ಕೆ ಟೀಂ ಇಂಡಿಯಾ ಯಾವ ರಣತಂತ್ರದೊಂದಿಗೆ ಆಗಮಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

Live Tv

Leave a Reply

Your email address will not be published. Required fields are marked *

Back to top button