ನವದೆಹಲಿ: ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ವಿಶ್ವಕಪ್ (World Cup) ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ ಮುಗಿಸಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಸಲುವಾಗಿ ವಿಶ್ರಾಂತಿಯಲ್ಲಿದ್ದಾರೆ. ವಿಂಡೀಸ್ ಪ್ರವಾಸ ಮುಗಿಸಿದ ಬೆನ್ನಲ್ಲೇ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ತಮ್ಮ ಕ್ರಿಕೆಟ್ ಅಕಾಡೆಮಿಯನ್ನೂ ಸಹ ಅವರು ಆರಂಭಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಅವರು ವಿಶ್ವಕಪ್ ಕ್ರಿಕೆಟ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: WorldCup ಟೂರ್ನಿಗೆ ಆಸೀಸ್ ಬಲಿಷ್ಠ ತಂಡ ಪ್ರಕಟ – ಸ್ಟಾರ್ ಆಲ್‌ರೌಂಡರ್‌ಗೆ T20 ನಾಯಕತ್ವದ ಹೊಣೆ
Advertisement
Advertisement
2011 ರಲ್ಲಿ ಟೀಂ ಇಂಡಿಯಾ ಗೆದ್ದಾಗ ನಾನು ತಂಡದ ಭಾಗವಾಗಿರಲಿಲ್ಲ. ಆ ಗೆಲುವನ್ನು ಸಮೀಪದಿಂದ ಸಂಭ್ರಮಿಸಲು ಸಾಧ್ಯವಾಗಿರಲಿಲ್ಲ. ಆದರೆ ಗೆಲುವನ್ನು ಸಂಭ್ರಮಿಸಿದ್ದೆ. ಆ ಗೆಲುವಿನ ಹಿಂದಿನ ನೆನಪುಗಳು ಅಚ್ಚಳಿಯದೆ ಉಳಿದಿವೆ ಎಂದಿದ್ದಾರೆ. ಈ ಬಾರಿಯ ನಾನು ಆ ಗೆಲುವಿನ ಭಾಗವಾಗಲಿದ್ದೇನೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
Advertisement
Advertisement
ಭಾರತದ 10 ಸ್ಥಳಗಳಲ್ಲಿ ಪಂದ್ಯಗಳು ನಡೆಯಲಿವೆ. ಅದಕ್ಕಾಗಿ ಈ ಬಾರಿಯ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಪ್ರತಿ ಪಿಚ್‍ನಲ್ಲೂ ಭಾರಿ ಬೆಂಬಲ ಸಿಗಲಿದೆ. ಜನ ವಿಶ್ವಕಪ್ ಪಂದ್ಯಗಳಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ ಎಂದಿದ್ದಾರೆ.
2011 ರಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ ತವರಿನಲ್ಲಿ 50 ಓವರ್‌ಗಳ ವಿಶ್ವಕಪ್ ಗೆದ್ದಿತ್ತು. ಇದಾದ ಬಳಿಕ ಏಕದಿನ ಮತ್ತು ಟಿ20 ವಿಶ್ವಕಪ್ ಗೆದ್ದಿರಲಿಲ್ಲ. ಈಗ ತವರಿನ ಅಂಗಳದಲ್ಲಿ 12 ವರ್ಷಗಳ ನಂತರ 50 ಓವರ್‌ಗಳ ವಿಶ್ವಕಪ್ ಆಡಲಿದೆ. ಇದನ್ನೂ ಓದಿ: ನಮ್ಮ ಬ್ಯಾಟಿಂಗ್ ಕಳಪೆಯಾಗಿತ್ತು – ಅಗ್ರಕ್ರಮಾಂಕದ ಬ್ಯಾಟರ್‌ಗಳ ವಿರುದ್ಧ ಪಾಂಡ್ಯ ಬೇಸರ
Web Stories