Wednesday, 23rd October 2019

Recent News

ಅಭಿಮಾನಿಗಳ ಜೊತೆ ಟೀಂ ಇಂಡಿಯಾ ಆಟಗಾರರಿಂದ ಭಾಂಗ್ರ ಡ್ಯಾನ್ಸ್..!

ಸಿಡ್ನಿ: ಆಸೀಸ್ ವಿರುದ್ಧ ಸರಣಿ ಗೆದ್ದ ಖುಷಿಯಲ್ಲಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರಾರು ಅಭಿಮಾನಿಗಳ ಜೊತೆ ಸೇರಿ ಸಖತ್ತಾಗಿ `ದೇಶ್ ಕಿ ಧರ್ತಿ’ ಹಾಡಿಗೆ ಭಾಂಗ್ರ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.

ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುತ್ತಿಟ್ಟಿತ್ತು. 2-1ರ ಅಂತರದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ 71 ವರ್ಷಗಳ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಗೆಲುವನ್ನು ಸಾಧಿಸಿದೆ. ಈ ಗೆಲುವಿನ ಸಂಭ್ರಮದಲ್ಲಿರುವ ತಂಡದ ಆಟಗಾರರು ಅಭಿಮಾನಿಗಳ ಮಧ್ಯೆ ಮನಬಿಚ್ಚಿ ಕುಣಿದು ಕುಪ್ಪಳಿಸಿದ್ದಾರೆ.

ಕ್ರೀಡಾಂಗಣದಲ್ಲಿ ಗೆಲುವನ್ನು ಸಂಭ್ರಮಿಸಿದ ಬಳಿಕ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಇನ್ನಿತರೇ ಆಟಗಾರರು ಅಭಿಮಾನಿಗಳ ಜೊತೆ ಕುಣಿದು ಸಂಭ್ರಮಿಸಿದ ವಿಡಿಯೋ ಎಲ್ಲರ ಗಮನ ಸೆಳೆದಿತ್ತು. ಅದರಲ್ಲೂ ಭಾರತೀಯ ಕ್ರಿಕೆಟ್ ತಂಡ ಎಲ್ಲೇ ಆಟವಾಡಲು ಹೋದರು ತಮ್ಮೊಡನೆ ಬರುವ ಭದ್ರತಾ ಸಿಬ್ಬಂದಿಗಳ ಜೊತೆ `ದೇಶ್ ಕಿ ಧರ್ತಿ’ ಹಾಡಿಗೆ ಭಾಂಗ್ರ ಶೈಲಿಯಲ್ಲಿ ಹೆಜ್ಜೆ ಹಾಕಿದ್ದು ಅಭಿಮಾನಿಗಳ ಮನ ಗೆದ್ದಿದೆ. ಈ ಸಿಹಿ ಸಂಭ್ರಮದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಆಟಗಾರರ ಸಂಭ್ರಮ ಕಂಡು ಫುಲ್ ಖುಷ್ ಆಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *