– ಎಂಎಸ್‍ಡಿ ಎಲ್ಲಿ ಬಿಸಿಸಿಐಗೆ ಅಭಿಮಾನಿಗಳ ಪ್ರಶ್ನೆ
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಅಧಿಕೃತ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ 13 ಮಿಲಿಯನ್ ಅಭಿಮಾನಿಗಳೊಂದಿಗೆ ಬಿಸಿಸಿಐ ಶನಿವಾರ ಚಿತ್ರವನ್ನು ಹಂಚಿಕೊಂಡಿದೆ. ಅದರಲ್ಲಿ ಮಹಿಳಾ ಮತ್ತು ಪುರುಷರ ತಂಡದ 9 ಆಟಗಾರರ ಚಿತ್ರಗಳನ್ನು ಹಾಕಲಾಗಿದೆ. ಆದರೆ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸ್ಥಾನ ನೀಡಲಿಲ್ಲ. ಹೀಗಾಗಿ ಕೆಲವು ಅಭಿಮಾನಿಗಳು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೆಟ್ಟಿಗರೊಬ್ಬರು, ಧೋನಿ ಎಲ್ಲಿ ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬರು, ಧೋನಿ ಇಲ್ಲದೆ ಟೀಂ ಇಂಡಿಯಾ ಏನೂ ಅಲ್ಲ ಎಂದು ಕಮೆಂಟ್ ಮಾಡಿದ್ದಾರೆ.
Advertisement
ಬಿಸಿಸಿಐ ಬಿಡುಗಡೆ ಮಾಡಿದ ಫೋಟೋದಲ್ಲಿ ಸ್ಥಾನ ಪಡೆದ 9 ಆಟಗಾರರಲ್ಲಿ ಹಾಲಿ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ಜಸ್‍ಪ್ರೀತ್ ಬುಮ್ರಾ ಮತ್ತು ಶ್ರೇಯಸ್ ಅಯ್ಯರ್ ಸೇರಿದ್ದಾರೆ. ಮಹಿಳಾ ಕ್ರಿಕೆಟಿಗರಲ್ಲಿ ಹರ್ಮನ್‍ಪ್ರೀತ್ ಕೌರ್, ಸ್ಮೃತಿ ಮಂದಾನ ಮತ್ತು ಪೂನಂ ಯಾದವ್ ಇದ್ದಾರೆ.
Advertisement
https://www.instagram.com/p/B99fYetgD-U/
Advertisement
ಎಂ.ಎಸ್.ಧೋನಿ ಅವರನ್ನು ಈಗಾಗಲೇ ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಹೊರಗಿಡಲಾಗಿದೆ. ಅಂದಿನಿಂದ ಅವರ ನಿವೃತ್ತಿಯ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ಆದರೆ ಈ ಬಗ್ಗೆ ಧೋನಿ ಮಾತ್ರ ಈವರೆಗೂ ಏನನ್ನೂ ಹೇಳಿಲ್ಲ. ಅವರು ಐಪಿಎಲ್ ಮೂಲಕ ಟೀಂ ಇಂಡಿಯಾಗೆ ಮರಳಲಿದ್ದಾರೆ. ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ತಂಡಕ್ಕೆ ಮರಳಬಹುದು ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ, ಧೋನಿ ಅವರ ಭವಿಷ್ಯದ ಬಗ್ಗೆ ಹೇಳಿದ್ದರು.
Advertisement
ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ವಿರೇಂದ್ರ ಸೆಹ್ವಾಗ್ ಅವರು 4 ದಿನಗಳ ಹಿಂದೆ ಮಾತನಾಡಿ, ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಧೋನಿ ತಂಡಕ್ಕೆ ಮರಳುವುದು ಕಷ್ಟ ಎಂದು ಹೇಳಿದ್ದರು. ಸೆಹ್ವಾಗ್ ಪ್ರಕಾರ, ಕೆಎಲ್ ರಾಹುಲ್ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್‍ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಜೊತೆಗೆ ರಿಷಬ್ ಪಂತ್ ಕೂಡ ವಿಕೆಟ್ ಕೀಪಿಂಗ್‍ಗೆ ಫೈಟ್ ನಡೆಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಂ.ಎಸ್.ಧೋನಿ ಅವರು ತಂಡಕ್ಕೆ ಸೇರುವುದು ಅಸಾಧ್ಯ ಎನ್ನುವುವಾಗಿದೆ.