ಗುವಾಹಟಿ: ಆಸೀಸ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯ ಇಂದು ಇಲ್ಲಿನ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಈಗಾಗಲೇ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಸಾಧಿಸಿದೆ.
ಟೀಂ ಇಂಡಿಯಾ ಈ ಪಂದ್ಯಕ್ಕಾಗಿ ಉತ್ತಮ ಅಭ್ಯಾಸವನ್ನೇ ನಡೆಸಿದೆ. ಪ್ರಾಕ್ಟೀಸ್ ವೇಳೆ ಟೀಂ ಇಂಡಿಯಾ ಆಟಗಾರರು ಫುಟ್ಬಾಲ್ ಆಡಿ ಗಮನ ಸೆಳೆದರು.
Advertisement
Advertisement
ಸತತ 7 ವರ್ಷದ ಬಳಿಕ ಇಂದು ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಹೀಗಾಗಿ ಈ ಪಿಚ್ ಯಾವ ರೀತಿ ವರ್ತಿಸುತ್ತದೆ ಎಂದು ಹೇಳುವುದು ಕಷ್ಟ ಎಂದು ಕ್ರಿಕೆಟ್ ತಜ್ಞರು ಹೇಳಿದ್ದಾರೆ. ಈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯ ಇದಾಗಲಿದೆ.
Advertisement
ಆಸೀಸ್ ಆಟಗಾರರಿಗೆ ಟೀಂ ಇಂಡಿಯಾದ ಸ್ಪಿನ್ ಬೌಲರ್ ಗಳಾದ ಕುಲದೀಪ್ ಯಾದವ್ ಹಾಗೂ ಚಾಹಲ್ ಸಿಂಹಸ್ವಪ್ನವಾಗಿ ಕಾಡುತ್ತಿದ್ದಾರೆ. ಅದರಲ್ಲೂ ಚಾಹಲ್ ಗ್ಲೆನ್ ಮ್ಯಾಕ್ಸ್ ವೆಲ್ ಅವರನ್ನು ಈ ಪ್ರವಾಸದಲ್ಲಿ 4 ಬಾರಿ ಔಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
Advertisement
ಕಳೆದ ಸೀಸನ್ ನಲ್ಲಿ ನಡೆದ ರಣಜಿ ಪಂದ್ಯಾವಳಿಯಲ್ಲಿ ಹೈದರಾಬಾದ್ ತಂಡ ಇದೇ ಕ್ರೀಡಾಂಗಣದಲ್ಲಿ 36 ರನ್ ಗಳಿಗೆ ಆಲೌಟಾಗಿತ್ತು. 2010ರ ನವೆಂಬರ್ 28ರಂದು ಇಲ್ಲಿ ಕೊನೆಯ ಬಾರಿಗೆ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣಸಾಡಿತ್ತು. ಆ ಪಂದ್ಯದಲ್ಲಿ ಭಾರತ 40 ರನ್ ಗಳ ಗೆಲುವು ಸಾಧಿಸಿತ್ತು.
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇದುವರೆಗೆ ಒಟ್ಟು 14 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 10 ಹಾಗೂ ಆಸ್ಟ್ರೇಲಿಯಾ 4 ಪಂದ್ಯಗಳನ್ನು ಗೆದ್ದಿವೆ. 2012ರ ನವೆಂಬರ್ 28ರ ನಂತರ ಭಾರತ ವಿರುದ್ಧ ನಡೆದ ಎಲ್ಲಾ ಟಿ20 ಪಂದ್ಯಗಳಲ್ಲೂ ಭಾರತವೇ ಗೆಲುವು ಸಾಧಿಸಿದೆ.