ಶ್ರೀನಗರ: ಆಗಸ್ಟ್ 15 ರಂದು ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಲಡಾಖ್‍ನಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಜುಲೈ 31 ಸೇನೆಯ ಪ್ಯಾರಾಚೂಟ್ ರೆಜಿಮೆಂಟ್‍ನಲ್ಲಿಯೇ ಕರ್ನಲ್ ಸೇವೆ ಮಾಡುತ್ತಿರುವ ಧೋನಿ ಆಗಸ್ಟ್ 15 ರವರೆಗೆ ತಮ್ಮ ಕರ್ತವ್ಯ ಮುಂದುವರಿಸಲಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಘೊಷಣೆ ಮಾಡಿತ್ತು.
Advertisement
Advertisement
ಸದ್ಯ ಲಡಾಖ್ ಕೇಂದ್ರಾಡಳಿತ ಪ್ರದೇಶ ಆಗಿರುವುದರಿಂದ ಆಗಸ್ಟ್ 15 ರಂದು ಧೋನಿ ಅವರು ಧ್ವಜಾರೋಣ ಮಾಡಲಿದ್ದಾರೆ. ಆ ಮೂಲಕ ವಿಶೇಷ ಸಂದೇಶ ರವಾನೆ ಮಾಡಲು ಸಿದ್ಧತೆ ಮಾಡಲಾಗಿದೆ. ಭದ್ರತೆಯ ದೃಷ್ಟಿಯಿಂದ ಈ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ ಎಂದು ಮಾಧ್ಯಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.
Advertisement
ಭಾರತೀಯ ಸೇನೆಯ ಪ್ಯಾರಾಚೂಟ್ ರೆಜಿಮೆಂಟ್‍ನ ಟೆರಿಟೊರಿಯಲ್ ಅರ್ಮಿ ಯೂನಿಟ್‍ನಲ್ಲಿ 38 ವರ್ಷದ ಧೋನಿ ಅವರಿಗೆ 2011 ರಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿತ್ತು. ವಿಶೇಷ ಎಂದರೆ 2015 ರಲ್ಲಿ ಆಗ್ರಾದಲ್ಲಿ ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡದೊಂದಿಗೆ ಧೋನಿ ತರಬೇತಿ ಪಡೆದಿದ್ದರು. ಧೋನಿ 2020 ರ ಫೆಬ್ರವರಿಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಆಡಲಿದ್ದಾರೆ ಎಂಬ ಮಾಹಿತಿ ಇದೆ. ಇದರ ಜೊತೆ ಮುಂದಿನ ವರ್ಷದ ಐಪಿಎಲ್ ಟೂರ್ನಿಯನ್ನು ಆಡಲಿದ್ದಾರೆ ಎಂದು ಹೇಳಲಾಗಿದೆ.