ಡಬ್ಲಿನ್: ಐರ್ಲೆಂಡ್ (Ireland) ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ (Team India) 33 ರನ್‌ಗಳಿಂದ ಜಯಗಳಿಸುವ ಮೂಲಕ ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿಯನ್ನು ಗೆದ್ದುಕೊಂಡಿದೆ.
ಗೆಲ್ಲಲು 186 ರನ್‌ಗಳ ಗುರಿಯನ್ನು ಪಡೆದ ಐರ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಈ ಮೂಲಕ ತಮ್ಮ ಮೊದಲ ನಾಯಕತ್ವದಲ್ಲಿ ಬುಮ್ರಾ ವಿದೇಶಿ ನೆಲದಲ್ಲಿ ಸರಣಿ ಗೆದ್ದಿದ್ದಾರೆ.
Advertisement
ಐರ್ಲೆಂಡ್ 63 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಾಗ ಭಾರತ ಸುಲಭವಾಗಿ ಪಂದ್ಯವನ್ನು ಗೆಲ್ಲಬಹುದು ಎಂದು ಅಂದಾಜಿಸಲಾಗಿತ್ತು. ಆದರೆ 5ನೇ ವಿಕೆಟಿಗೆ ಆಂಡಿ ಬಾಲ್ಬಿರ್ನಿ ಮತ್ತು ಜಾರ್ಜ್ ಡಾಕ್ರೆಲ್ 30 ಎಸೆತಗಳಲ್ಲಿ 52 ರನ್ ಜೊತೆಯಾಟವಾಡಿ ಬಿಸಿ ಮುಟ್ಟಿಸಿದರು.
Advertisement
Advertisement
ತಂಡದ ಮೊತ್ತ 115 ರನ್ ಆಗಿದ್ದಾಗ ಜಾರ್ಜ್ ಡಾಕ್ರೆಲ್ ಎರಡನೇ ರನ್ ಓಡಲು ಯತ್ನಿಸಿದಾಗ ರನೌಟ್ ಆದರು. ಜಾರ್ಜ್ ಡಾಕ್ರೆಲ್ 13 ರನ್ ಗಳಿಸಿ ಔಟಾದರು. ಕೇವಲ 39 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಆಂಡಿ ಬಾಲ್ಬಿರ್ನಿ 72 ರನ್ (51 ಎಸೆತ, 5 ಬೌಂಡರಿ, 4 ಸಿಕ್ಸರ್) ಸಿಡಿಸಿ ಔಟಾದರು. ಇವರಿಬ್ಬರು ಔಟಾದ ಬೆನ್ನಲ್ಲೇ ತಂಡದ ರನ್ ವೇಗ ಇಳಿಕೆಯಾಯಿತು. ಬುಮ್ರಾ, ಪ್ರಸಿದ್ಧ್ ಕೃಷ್ಣ, ರವಿ ಬಿಷ್ಣೋಯಿ ತಲಾ ಎರಡು ವಿಕೆಟ್ ಪಡೆದರೆ ಅರ್ಶ್‌ದೀಪ್ ಸಿಂಗ್ 1 ವಿಕೆಟ್ ಪಡೆದರು.
Advertisement
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 34 ರನ್‌ಗಳಿಸುವಷ್ಟರಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ ಅವರ ವಿಕೆಟ್ ಕಳೆದುಕೊಂಡಿತ್ತು. ಮೂರನೇ ವಿಕೆಟಿಗೆ ಸಂಜು ಸ್ಯಾಮ್ಸನ್ (Sanju Samson) ಮತ್ತು ಋತ್‌ರಾಜ್ ಗಾಯಕ್ವಾಡ್ (Ruturaj Gaikwad ) 49 ಎಸೆತಗಳಿಗೆ 71 ರನ್ ಜೊತೆಯಾಟವಾಡಿ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು.
ಸ್ಯಾಮ್ಸನ್ 40 ರನ್ (26 ಎಸೆತ, 5 ಬೌಂಡರಿ, 1 ಸಿಕ್ಸರ್), ಗಾಯಕ್ವಾಡ್ 58 ರನ್ (43 ಎಸೆತ, 6 ಬೌಂಡರಿ 1 ಸಿಕ್ಸರ್) ಹೊಡೆದು ಔಟಾದರು. ನಂತರ ಶಿವಂ ದುಬೆ ಮತ್ತು ರಿಂಕು ಸಿಂಗ್ (Rinku Singh) 5ನೇ ವಿಕೆಟಿಗೆ 28 ಎಸೆತಗಳಲ್ಲಿ 55 ರನ್ ಜೊತೆಯಾಟವಾಡಿದರು. ರಿಂಕು ಸಿಂಗ್ 38 ರನ್ (21 ಎಸೆತ, 2 ಬೌಂಡರಿ, 3 ಸಿಕ್ಸರ್) ಶಿವಂ ದುಬೆ ಔಟಾಗದೇ 22 ರನ್(16 ಎಸೆತ, 2 ಸಿಕ್ಸರ್) ಹೊಡೆದರು.
Web Stories