ಮುಂಬೈ: ಅಫ್ಘಾನಿಸ್ತಾನ (Afghanistan) ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ (T20 Series) ಭಾರತ ತಂಡವನ್ನು ಬಿಸಿಸಿಐ ಭಾನುವಾರ (ಜ.7) ಪ್ರಕಟಿಸಿದೆ. ವಿಶೇಷವೆಂದರೆ 2023ರ ಏಕದಿನ ವಿಶ್ವಕಪ್ ಬಳಿಕ ಟಿ20 ಪಂದ್ಯಗಳಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದ ನಾಯಕ ರೋಹಿತ್ ಶರ್ಮಾ ಅವರಿಗೆ ಮತ್ತೆ ಟಿ20 ಪಂದ್ಯಗಳಿಗೆ ನಾಯಕತ್ವದ ಹೊಣೆ ನೀಡಲಾಗಿದೆ.
???? NEWS ????#TeamIndia’s squad for @IDFCFIRSTBank T20I series against Afghanistan announced ????
Rohit Sharma (C), S Gill, Y Jaiswal, Virat Kohli, Tilak Varma, Rinku Singh, Jitesh Sharma (wk), Sanju Samson (wk), Shivam Dube, W Sundar, Axar Patel, Ravi Bishnoi, Kuldeep Yadav,…
— BCCI (@BCCI) January 7, 2024
Advertisement
ರೋಹಿತ್ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ನಿರಂತರವಾಗಿ ಆಡುತ್ತಿದ್ದರು. ಹಲವು ತಿಂಗಳಿನಿಂದ ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ವರ್ಷದ ಜೂನ್‌ನಲ್ಲಿ ಟಿ20 ವಿಶ್ವಕಪ್ (T20 WorldCup) ಟೂರ್ನಿ ಆಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಚುಟುಕು ಸ್ವರೂಪದ ಟೂರ್ನಿಗೆ ಇಬ್ಬರು ಎಂಟ್ರಿಕೊಟ್ಟಿದ್ದಾರೆ. ಇದನ್ನೂ ಓದಿ: ಸೇರ್ಪಡೆಯಾದ 10 ದಿನದಲ್ಲೇ ವೈಎಸ್‌ಆರ್ ಕಾಂಗ್ರೆಸ್‌ಗೆ ಅಂಬಟಿ ರಾಯಡು ಗುಡ್‌ಬೈ
Advertisement
Advertisement
ಚುಟುಕು ಸ್ವರೂಪಕ್ಕೆ ಇವರಿಬ್ಬರನ್ನು ಆಯ್ಕೆ ಮಾಡುವ ಕುರಿತು ಸಾಕಷ್ಟು ಊಹಾಪೋಹಗಳು ಇದ್ದವು. ಈ ನಡುವೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಗಾಯದಿಂದಾಗಿ ಆಯ್ಕೆಗೆ ಲಭ್ಯರಿಲ್ಲ. ಹೀಗಾಗಿ ರೋಹಿತ್ ಮತ್ತು ಕೊಹ್ಲಿಯನ್ನು ತಂಡದಲ್ಲಿ ಹಿರಿಯ ಬ್ಯಾಟರ್‌ಗಳಾಗಿ ಬಿಸಿಸಿಐ (BCCI) ತಂಡಕ್ಕೆ ವಾಪಸ್ ಕರೆಸಿಕೊಂಡಿದೆ. ಇದನ್ನೂ ಓದಿ: T20 World Cup 2024 ವೇಳಾಪಟ್ಟಿ ಬಿಡುಗಡೆ; ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ಇಂಡೋ-ಪಾಕ್ ಕದನ
Advertisement
ಸಂಜುಗೆ ಮತ್ತೆ ಚಾನ್ಸ್:
ಯುವ ಆರಂಭಿಕರಾದ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಸಾಮರ್ಥ್ಯ ತೋರಿ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ. ಆದರೆ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಸಂಜು ಸ್ಯಾಮ್ಸನ್ ತಮ್ಮ ಸ್ಥಾನಕ್ಕೆ ಮರಳಿದ್ದು, ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 3ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಚುಟುಕು ಸ್ವರೂಪದಲ್ಲೂ ಅಬ್ಬರಿಸುವ ನಿರೀಕ್ಷೆ ಇದೆ. ಮತ್ತೋರ್ವ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಕೂಡ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
ಅಫ್ಘಾನ್ ವಿರುದ್ಧ ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್. ಇದನ್ನೂ ಓದಿ: ಭಾರತವನ್ನು ನಂ.1 ಪಟ್ಟದಿಂದ ಕೆಳಗಿಳಿಸಿದ ಆಸ್ಟ್ರೇಲಿಯಾ – ಪ್ಯಾಟ್ ಕಮ್ಮಿನ್ಸ್ ನಾಯಕತ್ವಕ್ಕೆ ಮೆಚ್ಚುಗೆ!
ಸರಣಿ ಯಾವಾಗ?
ಇದೇ ಜನವರಿ 11 ರಿಂದ ಸರಣಿ ಪ್ರಾರಂಭವಾಗಲಿದ್ದು, ಮೊದಲ ಟಿ20 ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಜ.14 ರಂದು ಇಂದೋರ್‌ನ ಹೋಳ್ಕರ್ ಮೈದಾನದಲ್ಲಿ 2ನೇ ಪಂದ್ಯ ನಡೆಯಲಿದೆ. ಜನವರಿ 17 ರಂದು ಅಂತಿಮ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಇದು ಭಾರತ ತಂಡಕ್ಕೆ ಕೊನೆಯ ಚುಟುಕು ಅಂತಾರಾಷ್ಟ್ರೀಯ ಸರಣಿಯಾಗಿರಲಿದೆ. ಹಾಗಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಧೋನಿಗೆ 15 ಕೋಟಿ ರೂ. ದೋಖಾ – ಮಾಜಿ ಪಾಲುದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಮಹಿ
ಅಫ್ಘಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷರ ಸಂಸತ:
ಮೂರು ಪಂದ್ಯಗಳ ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಳ್ಳುತ್ತಿರುವುದು ಅತೀವ ಖುಷಿ ನೀಡುತ್ತಿದೆ. ಭಾರತ ತಂಡದ ವಿಶ್ವದ ಅಗ್ರಮಾನ್ಯ ತಂಡ. ಅಂತಹ ತಂಡದ ವಿರುದ್ಧ ಸ್ಫರ್ಧಿಸುವುದು ಕಷ್ಟದ ವಿಷಯ. ಅಫ್ಘಾನಿಸ್ತಾನ ತಂಡವೂ ಇತ್ತೀಚೆಗೆ ಉತ್ತಮ ಸಾಧನೆ ಮಾಡುತ್ತಿದೆ ಎಂದು ನಾನು ನಂಬುತ್ತೇನೆ. ಭಾರತದ ವಿರುದ್ಧ ಹೆಚ್ಚು ಸ್ಪರ್ಧಾತ್ಮಕ ಸರಣಿಯನ್ನು ನೋಡುತ್ತಿದ್ದೇವೆ ಎಂದು ಅಫ್ಘಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮಿರ್ಮೈಸ್ ಅಶ್ರಫ್ ಹೇಳಿದ್ದಾರೆ.