CinemaDistrictsKarnatakaLatestMain PostSandalwood

ಅಭಿಮಾನಿಗಳ ಒತ್ತಡಕ್ಕೆ ಕೊನೆಗೂ ಮಣಿದ ‘ವಿಕ್ರಾಂತ್ ರೋಣ’ :ಏಪ್ರಿಲ್ ಮೊದಲ ವಾರದಲ್ಲಿ ಟೀಸರ್

Advertisements

ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಅಪ್ ಡೇಟ್ ಗಾಗಿ ಅಭಿಮಾನಿಗಳು ದಿನವೂ ಸಾವಿರಾರು ಟ್ವಿಟ್ ಗಳನ್ನು ಮಾಡುತ್ತಿದ್ದರು. ಅದನ್ನು ಸುದೀಪ್, ನಿರ್ದೇಶಕ ಅನೂಪ್ ಭಂಡಾರಿ ಮತ್ತು ನಿರ್ಮಾಪಕ ಜಾಕ್ ಮಂಜು ಅವರಿಗೆ ಟ್ಯಾಗ್ ಕೂಡ ಮಾಡುತ್ತಿದ್ದರು. ಆದರೂ, ಯಾವ ಮಾಹಿತಿಯನ್ನೂ ಟೀಮ್ ಕೊಟ್ಟಿರಲಿಲ್ಲ. ಇದೀಗ ಭರ್ಜರಿ ಟೀಸರ್ ಅನ್ನು ರಿಲೀಸ್ ಮಾಡುವುದಾಗಿ ನಿರ್ಮಾಪಕರು ಹೇಳಿದ್ದಾರೆ. ಟೀಸರ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

ತಮ್ಮ ನೆಚ್ಚಿನ ನಟನ ಸಿನಿಮಾ ಬಗ್ಗೆ ತಿಳಿದುಕೊಳ್ಳಲು ಸುದೀಪ್ ಅಭಿಮಾನಿಗಳು ಕಾಯುತ್ತಲೇ ಇರುತ್ತಾರೆ. ಹಾಗಾಗಿ ‘ವಿಕ್ರಾಂತ್ ರೋಣ’ ಅಪ್ ಡೇಟ್ ಗಾಗಿ ಒತ್ತಡವೂ ಹೆಚ್ಚಾಗಿತ್ತು. ಅದ್ಧೂರಿಯಾಗಿ ದುಬೈನಲ್ಲಿ ಕಾರ್ಯಕ್ರಮವಾದ ನಂತರ ಮತ್ತೇನಾದರೂ ಭರ್ಜರಿ ಸುದ್ದಿ ಕೊಡುತ್ತಾರೆ ಎಂದು ಕಾಯಲಾಗುತ್ತಿತ್ತು. ನಿರ್ಮಾಪಕ ಮಂಜು ಕೊನೆಗೂ ಒತ್ತಡಕ್ಕೆ ಮಣಿದಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಟೀಸರ್ ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ : RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

ಹಲವು ಕಾರಣಗಳಿಂದಾಗಿ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದರಿಂದ, ಹಲವು ಭಾಷೆಗಳಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಅಲ್ಲದೇ, 2ಡಿ ಮತ್ತು 3ಡಿಯಲ್ಲಿ ಈ ಸಿನಿಮಾ ತಯಾರಾಗಿರುವುದು ಮತ್ತೊಂದು ವಿಶೇಷ. ಏಕಕಾಲಕ್ಕೆ ಹಾಲಿವುಡ್ ಮತ್ತು ಭಾರತೀಯ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ.

Leave a Reply

Your email address will not be published.

Back to top button