ಬೆಂಗಳೂರು: ಯುವತಿಗೆ ಡಿನ್ನರಿಗೆ ಕರೆದು ಆಕೆಯ ಮೇಲೆ ಅತ್ಯಾಚಾರ ಎಸಗಿದ ಟೆಕ್ಕಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಮೂಲದ ಮೈಕೆಲ್ ಸೊರೆಂಗ್(23) ಬಂಧಿತ ಸಾಫ್ಟ್ ವೇರ್ ಉದ್ಯೋಗಿ. ನಿದ್ರೆ ಮಾತ್ರೆ ಬೆರೆಸಿದ ಜ್ಯೂಸ್ ಕುಡಿಸಿ 32 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
Advertisement
Advertisement
ಮೈಕಲ್ ಜಾರ್ಖಾಂಡ್ ನ ರಾಂಚಿ ಮೂಲದ ಯುವತಿಯನ್ನು ಸೆಪ್ಟಂಬರ್ 8ರಂದು ಊಟಕ್ಕೆಂದು ಮನೆಗೆ ಆಹ್ವಾನಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಬಳಿಕ ಸಂತ್ರಸ್ತೆ ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಮೈಕಲ್ ಮದುವೆಯಾಗುತ್ತೇನೆಂದು ನಂಬಿಸಿದ್ದಾನೆ. ನಂತರ ಕೆಲ ದಿನಗಳ ಬಳಿಕ ಸಂತ್ರಸ್ತೆ ಮೈಕಲ್ ನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಆತ ಫ್ಲಾಟ್ ಖಾಲಿ ಮಾಡಿ ಎಸ್ಕೇಪ್ ಆಗಿದ್ದಾನೆ. ಬಳಿಕ ನೊಂದ ಸಂತ್ರಸ್ತೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Advertisement
ಯುವತಿ ದೂರು ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376, 420 ಅಡಿ ಎಫ್‍ಐಆರ್ ದಾಖಲಿಸಿದ್ದಾರೆ. ಯುವತಿ ಮೇಲೆ ಅತ್ಯಾಚಾರವೆಸಗಿದ್ದಕ್ಕೆ ಪೊಲೀಸರು ಟೆಕ್ಕಿಯನ್ನು ಬಂಧಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv