– ಬೆಂಗಳೂರು ಟೆಕ್ಕಿಯ ಪತ್ನಿ, ಅತ್ತೆ, ಬಾಮೈದಗೆ 14 ದಿನಗಳ ನ್ಯಾಯಾಂಗ ಬಂಧನ
ಲಕ್ನೋ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಅತುಲ್ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾ ಅರೆಸ್ಟ್ ಆಗಿದ್ದರು. ಈಗ ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾ ಪೊಲೀಸರಿಗೆ ಲಾಕ್ ಆಗಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಆತ್ಮಹತ್ಯೆ ಕೇಸ್ – ಅತ್ತೆ, ಬಾಮೈದ ಪೊಲೀಸರ ವಶಕ್ಕೆ
ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದನ್ನೂ ಓದಿ: ಸಾಯುವುದಕ್ಕೆ 2 ನಿಮಿಷ ಮುಂಚೆ ರಾಷ್ಟ್ರಪತಿಗಳಿಗೆ ಇ-ಮೇಲ್ ಕಳುಹಿಸಿದ್ದ ಟೆಕ್ಕಿ ಅತುಲ್!
ಪತಿ ಆತ್ಮಹತ್ಯೆ ಬಳಿಕ ನಿಖಿತಾ ಪರಾರಿಯಾಗಿದ್ದರು. ಹುಡುಕಾಟ ಆರಂಭಿಸಿದ್ದ ಮಾರತ್ತಹಳ್ಳಿ ಪೊಲೀಸರು ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್ ಮೇಲೆ ಕೇಸ್ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್