ಚೆನ್ನೈ: ತಲೆ ಮೇಲೆ ಬ್ಯಾನರ್ ಬಿದ್ದು ಅಪಘಾತದಲ್ಲಿ ಟೆಕ್ಕಿ ಮೃತಪಟ್ಟ ಘಟನೆ ತಮಿಳುನಾಡಿನ ಚೆನ್ನೈನ ಪಾಲಿಕರಣೈಯಲ್ಲಿ ನಡೆದಿದೆ.
ಶುಭಾಶ್ರೀ(23) ಮೃತಪಟ್ಟ ಯುವತಿ. ಶುಭಾಶ್ರೀ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಕ್ರಮವಾಗಿ ಹಾಕಲಾಗಿದ್ದ ಎಐಎಡಿಎಂಕೆಯ ಬ್ಯಾನರ್ ಆಕೆಯ ತಲೆಯ ಮೇಲೆ ಬಿದ್ದಿದೆ. ಪರಿಣಾಮ ಶುಭಾಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂಬದಿಯಿಂದ ಲಾರಿಯೊಂದು ಯುವತಿಯ ಮೇಲೆ ಹರಿದು ಹೋಗಿದೆ.
ಈ ಅಪಘಾತದಲ್ಲಿ ಶುಭಾಶ್ರೀ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಶುಭಾಶ್ರೀ ಮೃತಪಟ್ಟಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
2017ರಲ್ಲಿ ಮದ್ರಾಸ್ ಹೈಕೋರ್ಟ್ ತಮಿಳುನಾಡಿನಾದ್ಯಂತ ಎಲ್ಲಾ ರೀತಿಯ ಬ್ಯಾನರ್ ಗಳು, ಹೋರ್ಡಿಂಗ್‍ಗಳು ಹಾಗೂ ಜಾಹೀರಾತುಗಳನ್ನು ನಿಷೇಧಿಸುವ ಆದೇಶವನ್ನು ನೀಡಿತ್ತು. ಹೈಕೋರ್ಟ್ ಹಲವು ಬಾರಿ ಎಚ್ಚರಿಕೆ ಹಾಗೂ ಆದೇಶ ನೀಡಿದರು ಸಹ ರಾಜಕೀಯ ಪಕ್ಷಗಳು ಹಾಗೂ ಅವರ ಬೆಂಬಲಿಗರು ಇಂತಹ ಅಕ್ರಮ ಬ್ಯಾನರ್ ಹಾಕುವ ಮೂಲಕ ಜನರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ.