ಬೆಂಗಳೂರು: ಅನುಮಾನಸ್ಪದವಾಗಿ ಪಿಜಿಯ ರೋಮ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ತಮಿಳುನಾಡು ಮೂಲದ ಸೇಟು ಕುಮಾರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಸೇಟು ಕುಮಾರ್ ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪನಿಯ ಸಾಫ್ಟ್ ವೇರ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು.
Advertisement
ಸೇಟು ಕುಮಾರ್ ಕೆಲವು ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ನಿಲಾದ್ರಿ ನಗರದ ವಿನಾಯಕ ಪಿಜಿಯಲ್ಲಿ ಮೂರು ಜನ ಸ್ನೇಹಿತರ ಜೊತೆ ವಾಸವಿದ್ದರು. ಆದರೆ ಸೋಮವಾರ ತನ್ನ ರೋಮ್ ನಲ್ಲಿ ಅನುಮಾನಸ್ಪದವಾಗಿ ಸಾವಿಗೀಡಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv