ಹೈದರಾಬಾದ್: ಪ್ರೇಮ ವೈಫಲ್ಯ ಆಗಿದ್ದಕ್ಕೆ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ಆಂಧ್ರ ಪ್ರದೇಶದ ಹೈದರಾಬಾದ್‍ನಲ್ಲಿ ನಡೆದಿದೆ.
ಯತೀಶ್ ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಯತೀಶ್ ಬಾಂದ್ಲಾಗುಡದಲ್ಲಿ ವಾಸವಿದ್ದು, ವಿಪ್ರೋ ಕಂಪನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬುಧವಾರ ರಾತ್ರಿ ಉಪ್ಪಲ್ ಎಚ್‍ಎಂಡಿಎ ಲೇಔಟ್‍ನ ಮರವೊಂದರಲ್ಲಿ ಯತೀಶ್‍ನ ಮೃತದೇಹ ಪತ್ತೆಯಾಗಿದೆ. ಅದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯತೀಶ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾಗ ಡೆತ್‍ನೋಟ್ ದೊರೆತಿದೆ. ಲವ್ ಫೆಲ್ಯೂರ್ ಆಗಿದ್ದಕ್ಕೆ ಯತೀಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಡೆತ್‍ನೋಟ್‍ನಿಂದ ತಿಳಿದು ಬಂದಿದೆ.
ಯತೀಶ್ ಮೃತದೇಹವನ್ನು ಒಸ್ಮಾನಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದರು. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.