ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಆರ್‌ಸಿಬಿ ವರ್ಸಸ್ ಸಿಎಸ್‌ಕೆ (RCB vs CSK) ಪಂದ್ಯದ ಐಪಿಎಲ್ ಟಿಕೆಟ್ (IPL Ticket) ಪಡೆಯಲು ಹೋಗಿ ವಂಚನೆಗೊಳಗಾಗಿ ಟೆಕ್ಕಿಯೊಬ್ಬರು (Techie) 1.46 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.
ಟೆಕ್ಕಿ ಐಪಿಎಲ್ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಲಾಗಿದ್ದ ಒಂದು ಪೋಸ್ಟ್ ಅನ್ನು ನೋಡಿದ್ದಾರೆ. ಆ ಪೋಸ್ಟ್ ನೋಡಿ ಆಮಿಷಕ್ಕೆ ಒಳಗಾದ ಅವರು, ಪೋಸ್ಟ್ ಹಾಕಿದ ವಂಚಕನನ್ನು ಸಂಪರ್ಕಿಸಿದ್ದಾರೆ. ವಂಚಕ ಪಂದ್ಯದ ಟಿಕೆಟ್‌ಗಳು, ಊಟದ ಕೂಪನ್‌ಗಳು ಮತ್ತು ವಿಐಪಿ ಸೌಲಭ್ಯಗಳನ್ನು ಹೊಂದಿರುವ ಟಿಕೆಟ್‌ಗಳನ್ನು ನೀಡುವುದಾಗಿ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ಟೆಕ್ಕಿ, ತಾನು ಮತ್ತು ತನ್ನ ತಾಯಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ಪಾವತಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು RCB vs CSK ಹೈವೋಲ್ಟೇಜ್ ಕದನ – ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 2,300 ಪೊಲೀಸರಿಂದ ಭದ್ರತೆ
ಆರಂಭಿಕ ಹಣ ಪಾವತಿಯ ನಂತರ, ವಂಚಕನು ಟೆಕ್ಕಿಗೆ ಸ್ಟೇಡಿಯಂನ ಗೇಟ್ ಸಂಖ್ಯೆ 10ರ ಬಳಿ ಬರಲು ಸೂಚಿಸಿದ್ದಾನೆ. ಅಲ್ಲಿಗೆ ತಲುಪಿದಾಗ, ಟೆಕ್ಕಿ ಕನಿಷ್ಠ ದರದ ಟಿಕೆಟ್‌ಗಳನ್ನು ಕೇಳಿದ್ದಾರೆ. ಆದರೆ, ವಂಚಕನು ಕೂಪನ್‌ಗಳು ಮತ್ತು ಭದ್ರತಾ ಠೇವಣಿ ಹೆಸರಿನಲ್ಲಿ ಹೆಚ್ಚಿನ ಹಣವನ್ನು ವಸೂಲಿ ಮಾಡಿದ್ದಾನೆ. ಬೇರೆ ಬೇರೆ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1.46 ಲಕ್ಷ ರೂ. ಹಣವನ್ನು ಟೆಕ್ಕಿಯಿಂದ ವರ್ಗಾಯಿಸಿಕೊಂಡಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್ – ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ
ತಾನು ವಂಚನೆಗೆ ಒಳಗಾಗಿರುವುದನ್ನು ಅರಿತ ಟೆಕ್ಕಿ, ತಕ್ಷಣವೇ ಸೈಬರ್ ಕಂಟ್ರೋಲ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ಟಿಕೆಟ್ ಆಮಿಷವೊಡ್ಡಿ, ಇನ್‌ಸ್ಟಾಗ್ರಾಮ್ ಮೂಲಕ ಟೆಕ್ಕಿಯೊಬ್ಬರಿಂದ 1.46 ಲಕ್ಷ ರೂ. ವಂಚನೆ ಮಾಡಲಾಗಿದೆ. ಹಣ ಪಾವತಿಯಾದ ಬ್ಯಾಂಕ್ ಖಾತೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆನೇಕಲ್‌ನಲ್ಲಿ ಅದ್ಧೂರಿಯಾಗಿ ನಡೆದ ಒಣ ಕರಗ ಮಹೋತ್ಸವ

