ಹೈದರಾಬಾದ್: ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಟೆಕ್ಕಿ ಪತ್ನಿ ಮೃತಪಟ್ಟಿದ್ದು, ಪತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಅಪಘಾತದ ಭೀಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಮ್ಯಾ(28) ಮೃತ ಟೆಕ್ಕಿ. ಪತಿ ಪ್ರವೀಣ್ ಗಂಭೀರವಾಗಿ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಂಪತಿ ಚಿಲ್ಕೂರು ಬಾಲಾಜಿ ದೇವಾಯಲದಿಂದ ಗಚಿಬೌವ್ಲಿಯಲ್ಲಿರುವ ಮನೆಗೆ ಬೈಕಿನಲ್ಲಿ ವಾಪಸ್ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
- Advertisement 2
- Advertisement 3
ಶನಿವಾರ ಬೆಳಗ್ಗೆ 9 ಗಂಟೆಗೆ ರಮ್ಯಾ ಮತ್ತು ಪ್ರವೀಣ್ ಬೈಕಿನಲ್ಲಿ ಹೈದರಾಬಾದ್ ನಗರದ ಐಸಿಐಸಿಐ ಲೊಂಬಾರ್ಡ್ ಜಂಕ್ಷನ್ ಬಳಿ ಬರುತ್ತಿದ್ದರು. ಲಾರಿ ಮತ್ತು ಬೈಕ್ ಒಂದೇ ಸಮನಾಗಿ ಬರುತ್ತಿದ್ದವು. ಲಾರಿ ಎಡಕ್ಕೆ ತಿರುಗಿದೆ, ಇದೇ ಸಮಯದಲ್ಲಿ ಬೈಕ್ ಕೂಡ ಲಾರಿ ಮುಂದೆ ಬಂದಿದೆ. ಆಗ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕಿನಲ್ಲಿ ಹಿಂಬದಿ ಕುಳಿತಿದ್ದ ರಮ್ಯಾ ನೆಲಕ್ಕೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದಿದೆ.
- Advertisement 4
ಪರಿಣಾಮ ರಮ್ಯಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಪ್ರವೀಣ್ ಗೆ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿದ್ದು ಎಂಎನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು.
ಈ ಅಪಘಾತ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಅಪಘಾತ ನಡೆದ ತಕ್ಷಣ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv