DharwadDistrictsKarnatakaLatestLeading NewsMain Post

ಸಿಎಂ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಬೇಕಿದ್ದ ವಿಶೇಷ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.

ಇಂದು ಸಿಎಂ ಇದ್ದ ವಿಮಾನ ಬೆಳಗ್ಗೆ 8.45ಕ್ಕೆ ಎಚ್‌ಎಎಲ್‌ನಿಂದ ಟೇಕ್ ಆಫ್ ಆಗಿ 9:45ರ ಸುಮಾರಿಗೆ ಹುಬ್ಬಳ್ಳಿಗೆ ಆಗಮಿಸಬೇಕಿತ್ತು. ಆದರೆ ಸಿಎಂ ವಿಮಾನದಲ್ಲಿ ಬೆಳಗ್ಗೆ ತಾಂತ್ರಿಕ ದೋಷ ಕಂಡು ಬಂದ ಕಾರಣ ಕ್ಲಿಯರೆನ್ಸ್ ಸಿಗಲಿಲ್ಲ. ಹೀಗಾಗಿ ಪ್ರಯಾಣ ವಿಳಂಬವಾಗಿದೆ. ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್‌, ಎಸ್‌.ಟಿ.ಸೋಮಶೇಖರ್‌ ನಿಲ್ದಾಣದಲ್ಲೇ ಕಾಯುವಂತಾಯಿತು. ಇದನ್ನೂ ಓದಿ: ಲ್ಯಾಂಡಿಂಗ್ ಸಮಸ್ಯೆಯಾದ ಸಿಎಂ ಬೊಮ್ಮಾಯಿ ಇದ್ದ ವಿಮಾನ

Basavaraj bommai

ಬಿಜೆಪಿ ಕಾರ್ಯಕಾರಿಣಿಯ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಸಚಿವರು ತೆರಳಬೇಕಿತ್ತು. ಆದರೆ ತಾಂತ್ರಿಕ ದೋಷ ಕಾರಣ ವಿಳಂಬವಾದ್ದರಿಂದ ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ, ಆರ್‌.ಅಶೋಕ್, ಎಸ್.ಟಿ.ಸೋಮಶೇಖರ್ ಪಾಲ್ಗೊಂಡರು. ಸಿಎಂ ಹಾಗೂ ಸಚಿವರ ಪ್ರಯಾಣಕ್ಕೆ ಬದಲಿ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 12:45 ಗಂಟೆಗೆ ಪ್ರಯಾಣ ಬೆಳೆಸಲಿದ್ದಾರೆ.

ಸಿಎಂ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಈ ರೀತಿ ತಾಂತ್ರಿಕ ದೋಷ ಕಂಡು ಬಂದಿದ್ದು, ಇದು ಎರಡನೇ ಬಾರಿಯಾಗಿದೆ. ಇದನ್ನೂ ಓದಿ: ಸಿಎಂ ಬದಲಾವಣೆ ಕೇವಲ ಊಹಾಪೋಹ: ನಳಿನ್‍ ಕುಮಾರ್ ಕಟೀಲ್

ಹಿಂದೊಮ್ಮೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಇದ್ದ ವಿಮಾನ ಲ್ಯಾಂಡಿಂಗ್‌ಗೆ ಸಮಸ್ಯೆ ಉಂಟಾಗಿತ್ತು. ಆದರೆ ಈಗ ಟೆಕ್ ಆಫ್ ಆಗುವಾಗ ಸಮಸ್ಯೆ ಕಂಡು ಬಂದಿದೆ. ಇದನ್ನೂ ಓದಿ: ಮದ್ಯ ಸೇವಿಸಬೇಕು ಅನ್ನೋರು ಬಿಹಾರಕ್ಕೆ ಬರಲೇಬೇಡಿ: ನಿತೀಶ್ ಕುಮಾರ್

Leave a Reply

Your email address will not be published.

Back to top button