ಕೋಲಾರ: ಭಾರತೀಯ ವಾಯಸೇನೆಗೆ (Indian Air Force) ಸೇರಿದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ (Technical Fault) ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೊಲಾರದಲ್ಲಿ ತುರ್ತು ಭೂಸ್ಪರ್ಶವಾಗಿದೆ.
ಕೋಲಾರ (Kolara) ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೂವರು ವಾಯುಸೇನೆಯ ಪೈಲಟ್‌ಗಳು ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ಒರ್ವ ಮಹಿಳಾ ಪೈಲಟ್ ಸೇರಿದಂತೆ ಮೂವರು ಸೇಫ್ ಆಗಿದ್ದಾರೆ. ಇದನ್ನೂ ಓದಿ: ತೆಲಂಗಾಣ| 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಸಂತ್ರಸ್ತೆ ಕುಟುಂಬಸ್ಥರಿಂದ ಆರೋಪಿ ಮನೆ, ಕಾರಿಗೆ ಬೆಂಕಿ
Advertisement
Advertisement
ಕರಪನಹಳ್ಳಿ ಗ್ರಾಮದ ಬಳಿ ಇರುವ ಕೆರೆ ಅಂಗಳದಲ್ಲಿ ಸುರಕ್ಷಿತವಾಗಿ ಇಳಿದ ಹೆಲಿಕಾಪ್ಟರ್ ನೋಡಲು ಜನರು ನಾ ಮುಂದು ತಾ ಮುಂದು ಎಂದು ಮುಂದಾಗಿದ್ದು, ಸ್ಥಳದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಬಂಗಾರಪೇಟೆ ಪೊಲೀಸರ ಜಮಾವಣೆಯಾಗಿದ್ದಾರೆ. ಸದ್ಯ ವಾಯು ಪಡೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಸಂಪುಟ ಪುನರ್‌ರಚನೆ – ಮತ್ತೆ ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ ಸ್ವೀಕಾರ
Advertisement
Advertisement
ಬೆಂಗಳೂರಿನ ಯಲಹಂಕ ಏರ್ ಇಂಡಿಯಾಗೆ ಸೇರಿದ ಈ ಹೆಲಿಕಾಪ್ಟರ್ ತರಬೇತಿ ನಿಮಿತ್ತ ಕೋಲಾರದ ಕೆಜಿಎಫ್ ಹಾಗೂ ಬಂಗಾರಪೇಟೆ ಸುತ್ತಮುತ್ತ ಹಾರಾಟ ನಡೆಸುತಿತ್ತು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಯಲಹಂಕ ತಂತ್ರಜ್ಞರ ತಂಡ ಬಂದ ಬಳಿಕ ತಾಂತ್ರಿಕ ದೋಷ ಸರಿಪಡಿಸಲಿದ್ದಾರೆ. ಬಳಿಕ ಇಲ್ಲಿಂದ ಹೆಲಿಕಾಪ್ಟರ್ ವಾಪಸ್ ಆಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Mysuru | ಅನುಮತಿ ಪಡೆಯದೇ ಪಾರ್ಟಿ – 8 ಯುವತಿಯರು ಸೇರಿ 64 ಮಂದಿ ವಿರುದ್ಧ ಕೇಸ್
ಇನ್ನೂ ಸ್ಥಳದಲ್ಲಿ ಹೆಲಿಕಾಪ್ಟರ್ ನೋಡಲು ನೂರಾರು ಸಂಖ್ಯೆಯ ಜನರು ಜಮಾಯಿಸಿದ್ದು, ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸೇನಾ ಹೆಲಿಕಾಪ್ಟರ್ ಆಗಿರುವುದರಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.