ವಾಶಿಂಗ್ಟನ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ನ್ಯೂಯಾರ್ಕ್‌ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ.
ಇಮ್ರಾನ್ ಖಾನ್ ಹಾಗೂ ಇತರ ಪಾಕಿಸ್ತಾನಿ ಗಣ್ಯರು ಇದ್ದಂತಹ ನಿಯೋಗ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಪಾಲ್ಗೊಂಡು ಪಾಕಿಸ್ತಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಹೀಗಾಗಿ ನ್ಯೂಯಾರ್ಕ್‍ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
Advertisement
Imran Khan refers to PM Narendra Modi as Indian president in UNGA speech
Read @ANI Story | https://t.co/U9REmkk82P pic.twitter.com/rtzxTuXQFa
— ANI Digital (@ani_digital) September 27, 2019
Advertisement
ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಇಮ್ರಾನ್ ಖಾನ್ ನಿಯೋಗವು ಈ ರಾತ್ರಿಯನ್ನು ನ್ಯೂಯಾರ್ಕ್‍ನಲ್ಲೇ ಕಳೆಯಲಿದೆ. ವಿಮಾನದ ತಾಂತ್ರಿಕ ದೋಷ ಸರಿಪಡಿಸಿದ ನಂತರ ಪ್ರಯಾಣ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಇಮ್ರಾನ್ ಖಾನ್ ಒಂದು ವಾರಗಳ ಕಾಲ ಅಮೆರಿಕ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಹಿಂದಿರುಗುವಾಗ ವಿಶ್ವಸಂಸ್ಥೆಯ ಪ್ರಮುಖ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದರು.