ರಾಯಚೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ನೋಂದಣಿಗೆ (Registration) ನಾನಾ ತಾಂತ್ರಿಕ ಸಮಸ್ಯೆಗಳು (Technical Problem) ಎದುರಾಗಿವೆ. ಹೀಗಾಗಿ ರಾಯಚೂರಿನಲ್ಲಿ (Raichur) ಮಹಿಳೆಯರು ಹಾಗೂ ಸಾರ್ವಜನಿಕರು ಪರದಾಟ ನಡೆಸಿದ್ದಾರೆ.
ಬೆಳಗ್ಗೆಯಿಂದ ಸಂಜೆಯವರೆಗೆ ಕಾದು ನಿಂತರೂ ನೋಂದಣಿ ಮಾಡಿಸಲು ಆಗದೆ ಮಹಿಳೆಯರು ಮನೆಗಳಿಗೆ ಮರಳಿದ್ದಾರೆ. ಇಲ್ಲಿನ ಕರ್ನಾಟಕ ಒನ್ ಸೇರಿದಂತೆ ನೋಂದಣಿ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯ ಜೊತೆಗೆ ಪಡಿತರ ಚೀಟಿ ಕೆವೈಸಿ ಸಮಸ್ಯೆ, ಮನೆ ಯಜಮಾನಿ ಮೊಬೈಲ್ ಸಂಖ್ಯೆ ಜೋಡಣೆ, ಒಟಿಪಿ ಬಾರದೆ ಇರುವುದು ಸೇರಿದಂತೆ ನಾನಾ ಸಮಸ್ಯೆಗಳಿಂದ ನೋಂದಣಿ ಮಾಡಿಸಲು ಆಗುತ್ತಿಲ್ಲ. ಸರ್ವರ್ ಸರಿಹೋದರು ನೋಂದಣಿ ಕಾರ್ಯ ಪೂರ್ಣಗೊಳ್ಳುತ್ತಿಲ್ಲ. ಇದನ್ನೂ ಓದಿ: ಕಾಂಗ್ರೆಸ್‍ಗೆ ಜಂಪ್ ಆಗ್ತಾರಾ ಬಾಂಬೆ ಫ್ರೆಂಡ್ಸ್? – ಬಿಜೆಪಿ ಸ್ಥಳೀಯ ನಾಯಕರ ವಿರುದ್ಧ ಎಸ್‍ಟಿಎಸ್ ಕೆಂಡ
Advertisement
Advertisement
ಕರ್ನಾಟಕ ಒನ್ ಸೆಂಟರ್‌ನಲ್ಲಿ ಬೆಳಗ್ಗೆಯಿಂದ ಕೇವಲ 30 ನೋಂದಣಿಯಾಗಿದೆ. ಹೀಗಾಗಿ ಮಹಿಳೆಯರು ಪ್ರತಿದಿನ ಬಿಸಿಲಲ್ಲೇ ಗಂಟೆಗಟ್ಟಲೆ ಕಾಯುತ್ತಾ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇನ್ನೂ ನಗರಸಭೆ ಆವರಣದಲ್ಲಿ ತೆರೆಯಲಾಗಿದ್ದ ಮೂರು ನೋಂದಣಿ ಕೇಂದ್ರಗಳನ್ನು ತಾಂತ್ರಿಕ ಸಮಸ್ಯೆಗಳಿಂದ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಉಡುಪಿ ಕಾಲೇಜಿನ ವೀಡಿಯೋ ಪ್ರಕರಣ- ಗುಜರಾತ್ FSLಗೆ ರವಾನೆ ಸಾಧ್ಯತೆ
Advertisement
Web Stories