ನವದೆಹಲಿ: ಅಪ್ರಾಪ್ತ ಮಗನೊಬ್ಬ ಹಣ ಕೊಡಲಿಲ್ಲವೆಂದು ತನ್ನ ತಂದೆಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ರಾಷ್ಟ್ರ ರಾಜಧಾನಿಯ ನ್ಯೂ ಅಶೋಕ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 17 ವರ್ಷದ ಬಾಲಕ ಕೇವಲ 200 ರೂಪಾಯಿಗಾಗಿ ತಂದೆಯನ್ನೇ ಕೊಲೆ ಮಾಡಿದ್ದಾನೆ.
Advertisement
ಭಾನುವಾರ ರಾತ್ರಿ ಮಗ ತಂದೆಯ ಬಳಿ ಸುಮಾರು 150-200 ರೂ. ಹಣ ಕೊಡುವಂತೆ ಕೇಳಿದ್ದಾನೆ. ಆದರೆ ತಂದೆ ಹಣ ಕೊಡಲು ನಿರಾಕರಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಹುಡುಗ ಚಾಕುವಿನಿಂದ ತಂದೆಯ ಎದೆಗೆ ಚುಚ್ಚಿದ್ದಾನೆ. ತಕ್ಷಣ ತಾಯಿ ಪತಿಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲೇ ತಂದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿದಿದ್ದಾರೆ.
Advertisement
Advertisement
ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಮೃತ ವ್ಯಕ್ತಿ ನೋಯ್ಡಾದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv