LatestMain PostNational

ಬಾಲಕಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ – ಕೃತ್ಯ ವೀಡಿಯೋ ಪತ್ನಿಯೇ ಸೆರೆಹಿಡಿದ್ಲು

Advertisements

ಲಕ್ನೋ: ವ್ಯಕ್ತಿಯೋರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ಕೃತ್ಯವನ್ನು ಆತನ ಪತ್ನಿಯೇ ಚಿತ್ರೀಕರಿಸಿ ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡಿದ್ದಾಳೆ.

ಈ ಕುರಿತಂತೆ ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಅತ್ಯಾಚಾರ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಪತಿ-ಪತ್ನಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಫೈಜ್‍ಗಂಜ್ ಬೆಹ್ತಾ ಪೊಲೀಸ್ ಠಾಣೆ ಪ್ರಭಾರಿ ಚರಣ್ ಸಿಂಗ್ ರಾಣಾ ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ NDA ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಅಧಿಕೃತ ಘೋಷಣೆ

RAPE

ಜುಲೈ 12 ರಂದು ಗ್ರಾಮದ ವ್ಯಕ್ತಿ ತನ್ನನ್ನು ಮನೆಗೆ ಕರೆದುಕೊಂಡು ಹೋಗಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಕೃತ್ಯವನ್ನು ಆತನ ಹೆಂಡತಿ ಮೊಬೈಲ್ ಫೋನ್‍ನಲ್ಲಿ ರೆಕಾರ್ಡ್ ಮಾಡಿದ್ದಾಳೆ. ಅಲ್ಲದೇ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ಇದನ್ನೂ ಓದಿ: ನೂಪುರ್ ಶರ್ಮಾ ಫೋಟೋ ಅಪ್ಲೋಡ್ ಮಾಡಿದ್ದ ಉದ್ಯಮಿಗೆ ಕೊಲೆ ಬೆದರಿಕೆ – ಮೂವರ ಬಂಧನ

ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿರುವುದನ್ನು ತಿಳಿದು ದಂಪತಿ ವಿರುದ್ಧ ಬಾಲಕಿ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Live Tv

Leave a Reply

Your email address will not be published.

Back to top button