ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ (LokSabha Election) ತಯಾರಿ ಆರಂಭಿಸಿರುವ ಬಿಜೆಪಿ ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್ ಸೌ ಪಾರ್ (ಮೂರನೇ ಬಾರಿ ಮೋದಿ ಸರ್ಕಾರ, ಈ ಬಾರಿ ಬಿಜೆಪಿ ದಾಟಲಿದೆ 400 ಸ್ಥಾನ) ಎಂಬ ಹೊಸ ಘೋಷ ವಾಕ್ಯವನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ನೇತೃತ್ವದಲ್ಲಿ ಎರಡು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ ಬಳಿಕ ಈ ಘೋಷಣೆಗಳನ್ನು ಅಂತಿಮಗೊಳಿಸಲಾಯಿತು. ಸಭೆಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಉಪಸ್ಥಿತರಿದ್ದರು. ಇದನ್ನೂ ಓದಿ: ಲವ್ ಗುರು ಆದ ಪಾಕಿಸ್ತಾನದ ಹಂಗಾಮಿ ಪ್ರಧಾನಿ- ವೀಡಿಯೋ ವೈರಲ್
Advertisement
Advertisement
ಶೀಘ್ರದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಹಂತಗಳಲ್ಲಿ ಬಿಜೆಪಿ ಸಂಚಾಲಕರು ಮತ್ತು ಸಹ ಸಂಚಾಲಕರನ್ನು ನೇಮಕ ಮಾಡಲು ನಿರ್ಧರಿಸಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ , ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಭೇಟಿ ಕ್ಲಸ್ಟರ್‌ಗಳ ಮಟ್ಟದಲ್ಲಿ ಆರಂಭಸಲಾಗುತ್ತದೆ. ಸಭೆಯಲ್ಲಿ 150ಕ್ಕೂ ಹೆಚ್ಚು ಮುಖಂಡರು ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.
Advertisement
ಹಿಂದೆ ಏನಿತ್ತು?
2014- ಅಚ್ಛೇದಿನ್ ಆನೇ ವಾಲೆ ಹೈ (ಒಳ್ಳೆಯ ದಿನಗಳು ಬರಲಿವೆ)
2019 – ಫಿರ್ ಏಕ್ ಬಾರ್ ಮೋದಿ ಸರ್ಕಾರ್ (ಮತ್ತೊಂದು ಬಾರಿ ಮೋದಿ ಸರ್ಕಾರ್)
Advertisement